
ಎಫ್‌ಕೆಸಿಸಿಐಗೆ ಯಶವಂತರಾಜ್ ನಾಗಿರೆಡ್ಡಿ ಮತ್ತ ಕೆ.ಎಂ. ಶಿವಮೂರ್ತಿ ಆಯ್ಕೆ
ಕರುನಾಡ ಬೆಳಗು ಸುದ್ದಿ
ಬೆಂಗಳೂರು, 30- ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ೨೦೨೪- ೨೫ ನೇ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯಶವಂತ ರಾಜ್ ನಾಗಿರೆಡ್ಡಿ ಅವರು ಡಿಸ್ಟ್ರಿಕ್ಟ್ ಚೇಂಬರ್‌ನಿAದ ಐದನೇಬಾರಿ ಮತ್ತು ಹ್ಯಾಲೀಸ್ ಬ್ಲೂನ ಕೆ.ಎಂ. ಶಿವಮೂರ್ತಿ ಅವರು ಲಾರ್ಜ್ ಮ್ಯಾನ್ಯುಫಕ್ಚರಿಂಗ್ ಸೆಕ್ಟರ್ನಿಂದ ಮೂರನೇಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಬಳ್ಳಾರಿಯ ಈ ಇಬ್ಬರು ಪ್ರತಿನಿಧಿಗಳು ಸ್ಪರ್ಧಿಸಿದ್ದು, ಇಬ್ಬರೂ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರಭಾರಿ ಅಧ್ಯಕ್ಷ ಬಿ. ಮಹಾರುದ್ರಗೌಡರು, ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಡಾ. ಮರ್ಚೇಡ್ ಮಲ್ಲಿಕಾರ್ಜುನ, ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ್, ಉಪಾಧ್ಯಕ್ಷರುಗಳಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ, ಟಿ. ಶ್ರೀನಿವಾಸರಾವ್, ನಾಗಳ್ಳಿ ರಮೇಶ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.