2c136fae-be38-4577-97e1-318669006cc9

ಅ.13 ರಂದು ವಲಯ ಮಟ್ಟದ ಕ್ರೀಡಾಕೂಟ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 6- ತಾಲೂಕಿನ ಹಿರೇವಂಕಲಕುAಟಾ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ) ವಿಭಾಗದಲ್ಲಿ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಆ.೧೩ ಮತ್ತು ೧೪ ರಂದು ಬೆಳಿಗ್ಗೆ ೯ ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಬಸವರಾಜ ತಳವಾರ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ ರುದ್ರಯ್ಯಶಾಸ್ತಿçà ಕ್ರೀಡಾಕೂಟ ಉದ್ಘಾಟಿಸುವರು, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿರೇಶ ವಿರುಪಣ್ಣ ಕೋರಿ ಕ್ರೀಡಾ ಧ್ವಜಾರೋಹಣ ನೇರವೇರಿಸಲಿದ್ದಾರೆ. ನಿವೃತ್ತ ದೈಹಿಕ ಶಿಕ್ಷಕ ಅಮರಪ್ಪ ಎಸ್.ಭೋಗಾಪೂರ ಕ್ರೀಡಾ ಜ್ಯೋತಿ ಬೆಳಗಿಸುವರು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕ್ರೀಡಾ ಅಭಿಮಾನಿಗಳು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಉಪ ಪ್ರಾಚಾರ್ಯ ಬಾಬುಸಾಬ್ ಲೈನ್‌ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!