ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಗೆ ಸ್ಥಳ, ದಿನಾಂಕ ನಿಗದಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 19- ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಯನ್ನು ಚುನಾವಣಾ ಅವಧಿಯಲ್ಲಿ ಮೂರು ಬಾರಿ ಕೈಗೊಳ್ಳಲಾಗುತ್ತಿದೆ.
ಅದರಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿರುವ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಯನ್ನು ವೆಚ್ಚದ ವೀಕ್ಷಕರ ನಿರ್ದೇಶನದಂತೆ ಮೂರು ಬಾರಿ ಕೈಗೊಳ್ಳಲು ಸಮಯ ಮತ್ತು ಸ್ಥಳ ನಿಗದಿಪಡಿಸಲಾಗಿದೆ.
ಮೊದಲನೇ ಪರಿಶೀಲನೆಯು ಏಪ್ರೀಲ್ 25ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆವರೆಗೆ, ಎರಡನೇ ಪರಿಶೀಲನೆಯು ಏಪ್ರೀಲ್ 30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತ್ತು ಮೂರನೇ ಪರಿಶೀಲನೆಯು ಮೇ 5ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆವರೆಗೆ ನಡೆಯಲಿದೆ.
ಮೊದಲನೇ, ಎರಡನೇ ಮತ್ತು ಮೂರನೇ ಪರಿಶೀಲನೆಯು ಬಳ್ಳಾರಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸ್ಥಳ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
