
ಎಸ್ಎಸ್ಎಲ್ ಸಿ : ಗಣಿತ ಪರೀಕ್ಷೆ ಸುಸೂತ್ರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 2- ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯ ಗಣಿತ ವಿಷಯದ ಪರೀಕ್ಷೆಯು ಏಪ್ರೀಲ್ 2ರಂದು ಸುಸೂತ್ರವಾಗಿ ನಡೆಯಿತು.
ಪರೀಕ್ಷೆಗೆ ಒಟ್ಟು 20,250 ವಿದ್ಯಾರ್ಥಿಗಳು ಹಾಜರಾಗಿದ್ದು, 342 ವಿದ್ಯಾರ್ಥಿಗಳು ಗೈರಾಗಿದ್ದರು.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2774, ಹೊಸಪೇಟೆ ತಾಲೂಕಿನಲ್ಲಿ 5762, ಹೂವಿನಹಡಗಲಿ ತಾಲೂಕಿನಲ್ಲಿ 2938, ಕೂಡ್ಲಿಗಿ ತಾಲೂಕಿನಲ್ಲಿ 4647 ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ 4129 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.