
ಕನಕಗಿರಿ ಜಾತ್ರೆಯಲ್ಲಿ ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 1- ಕನಕಗಿರಿ ಪಟ್ಟಣದ ಐತಿಹಾಸಿಕ ಕನಕಾಚಲಪತಿ ದೇಗುಲದ ಜಾತ್ರೆ ನಿಮಿತ್ತ ಇಂದು ದೇಗುಲಕ್ಕೆ ಆಗಮಿಸಿದ ಭಕ್ತಾದಿಗಳಿಗೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ವೇಳೆ ತಾ.ಪಂ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಬಿ ಕಂದಕೂರ್ ಅವರು ಮಾತನಾಡಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾನ ಮಾಡಬೇಕು. ಮತದಾನ ಪವಿತ್ರವಾದದ್ದು, ಯಾರು ಮತದಾನದಿಂದ ಹೊರಗುಳಿಯದೇ, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ಈ ವೇಳೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಸೇರಿದಂತೆ ತಾಲೂಕು ಸ್ವೀಪ್ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು