2c136fae-be38-4577-97e1-318669006cc9

ಕುಷ್ಟಗಿ ಪುರಸಭೆ : ನಗರ ಕಲಿಕಾ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,21- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಡೇ ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಕಲಿಕಾ ಮತ್ತು ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲಿಕಾ ಮತ್ತು ಪ್ರಾಯೋಗಿಕ (ಟಿ.ಯು.ಎಲ್.ಐ.ಪಿ – ದ ಅರ್ಬನ್ ಲರ್ನಿಂಗ್ ಇಂಟರ್ನ್ಶಿಪ್ ಪ್ರೋಗ್ರಾಂ) ತರಬೇತಿ ಕಾರ್ಯಕ್ರಮವನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಲು ಸರಕಾರದಿಂದ ಗುರಿಗಳನ್ನು ನಿಗದಿ ಪಡಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡುವುದು, ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶ ಕಲ್ಪಿಸಿ ಕೊಡುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ.

ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ ಫೆ.28 ರೊಳಗಾಗಿ ಸರ್ಕಾರದ ವೆಬ್‌ಸೈಟ್ Ministry of Housing and Urban Affairs ನಲ್ಲ್ಲಿ https://internship.aicteindia.org/module_ulb /Dashboard/ Tulip Main/ ರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿ ಅರ್ಜಿ ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!