
ಕುಣಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ ಸ್ವೀಪ್ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,28- ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಣಿಕೇರಿ ತಾಂಡಾದಲ್ಲಿ ಮತದಾರರಿಂದ ದಿನಾಂಕ:28-03-2024ರಂದು ಸ್ವೀಪ್ ಜಾಥಾ ಕಾರ್ಯಕ್ರಮ ಜರುಗಿತು.
ತಾಲೂಕ ಸ್ವೀಪ್ ನೋಡಲ್ ಅಧಿಕಾರಿ ಹಾಗು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ ಮಾತನಾಡಿ ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ.
ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೇ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ತಾಂಡಾದ ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಳೆದ ಬಾರಿಗಿಂತ ಈ ಬಾರಿ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಳಕ್ಕೆ ಕೈ ಜೋಡಿಸೋಣ ಎಂದರು.
ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್ ಮಾತನಾಡಿ ಮತದಾನ ಪವಿತ್ರವಾದ ಕಾರ್ಯ. ಮತದಾನ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಮತದಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೊಣ ಎಂದರು. ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸ್ವೀಪ್ ಜಾಥಾವು ಗ್ರಾಮದ ದುರ್ಗಾದೇವಿ ದೇವಸ್ಥಾನದಿಂದ ಆರಂಭವಾಗಿ ತಾಂಡಾದ ಬೀದಿಗಳಲ್ಲಿ ಸಂಚರಿಸಿ ನಮ್ಮ ಮತ, ನಮ್ಮ ಹಕ್ಕು ಇತ್ಯಾದಿ ಘೋಷಣೆಗಳೊಂದಿಗೆ ಸಾಗಿ ಮುಕ್ತಾಯಗೊಂಡಿತು.
ಸದರಿ ಸ್ವೀಪ್ ಕಾರ್ಯಕ್ರಮದಲ್ಲಿ ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಪಂಚಾಯತ ಅಭಿವೃದ್ದಿ ಅಧಿಕಾರಿ ಆದಿಬಸಪ್ಪ ಭೂತಣ್ಣನವರ, ಡಿಇಒ ಹನಮೇಶ, ಗ್ರಾಮಸ್ಥರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.