
ಕೊಪ್ಪಳ : 28 ರಂದು ಮಿನಿ ಜಾಬ್ಫೇರ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಿನಿ ಜಾಬ್ಫೇರ್ ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಪಿಯುಸಿ/ತತ್ಸಮಾನ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮಿನಿ ಜಾಬ್ ಫೇರ್ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.