ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ , 03-  2023-24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಸತಿ ನಿಲಯಗಳಿಗೆ ಪ್ರವೇಶಾತಿ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
       ಕೆಲವು ವಸತಿ ನಿಲಯಗಳಲ್ಲಿ ಸೀಟುಗಳು ಖಾಲಿಯಿರುವ ಕಾರಣ ಹಾಗೂ ಇನ್ನೂ ಪ್ರವೇಶಾತಿಯ ಬೇಡಿಕೆಯ ಮನವಿಗಳು ಹೆಚ್ಚುತ್ತಿರುವುದರಿಂದ 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯ ವಿದ್ಯಾರ್ಥಿನಿಲಯ ಪೋರ್ಟಲ್ ಕೇಂದ್ರ, ಬೆಂಗಳೂರು ವತಿಯಿಂದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ/ಬಾಲಕಿಯರ ವಸತಿನಿಲಯಗಳಿಗೆ ಪ್ರವೇಶಾತಿ ಸೇವೆಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದೇ ಇರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಪುನಃ ರಾಜ್ಯ ವಿದ್ಯಾರ್ಥಿನಿಲಯ https://shp.karnataka.gov.in ತಂತ್ರಾAಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
2023-24 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ “ವಿದ್ಯಾಸಿರಿ” ಯೋಜನೆಯನ್ನು ಎಸ್.ಎಚ್.ಪಿ ತಂತ್ರಾAಶದ ಮೂಲಕವೇ ಅನುಷ್ಠಾನಗೊಳಿಸಲಾಗುತ್ತದೆ. ಈ ಯೋಜನೆಗೆ ರಾಜ್ಯ ವಿದ್ಯಾರ್ಥಿನಿಲಯ                     ತಂತ್ರಾಂಶದಲ್ಲಿ(ಎಸ್.ಎಚ್.ಪಿ) ಅರ್ಜಿ ಹಾಕಿ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಲಭ್ಯವಾಗದಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗುತ್ತಾರೆ. ವಿದ್ಯಾಸಿರಿ ಯೋಜನೆಗಾಗಿ ಪ್ರತ್ಯೇಕವಾಗಿ ಅರ್ಜಿಗಳನ್ನು ಆಹ್ವಾನಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 7019779885 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!