2c136fae-be38-4577-97e1-318669006cc9

ಮಾ.06, 07 ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಕರುನಾಡ ಬೆಳಗು ಸುದ್ದಿ
ಕೊಪ್ಪಳ, 04-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ಬೆಂಗಳೂರು, ಜಿಲ್ಲಾ ಶಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 06 ಮತ್ತು 07 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಮಾರ್ಚ್ 06 ಬೆಳಿಗ್ಗೆ 10.30 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉದ್ಘಾಟಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್‌ರಾಜ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಆಗಮಿಸುವರು.
ಮಾರ್ಚ್ 07 ರಂದು ಜಿಲ್ಲೆಯ ರಾಜ್ಯ ಸರ್ಕಾರಿ ವಿಕಲಚೇತನ ನೌಕರರ ಕ್ರೀಡಕೂಟ ನಡೆಯಲಿವೆ. ಅಂದು ಸಂಜೆ 6 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಆರ್.ಜುಮ್ಮನ್ನವರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಲೆಕ್ಕಾಧಿಕಾರಿ ಅಮೀನ್‌ಸಾಬ್, ಮುಖ್ಯ ಯೋಜನಾಧಿಕಾರಿ ಮಂಜುನಾಥ ಹಾಗೂ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಶಂಕ್ರಯ್ಯ, ಸರಕಾರಿ ವಿಕಲಚೇತನ ನೌಕರರ ಸಂಗದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ತಾಲ್ಲೂಕು ಘಟಕ, ಹಾಗೂ ವಿವಿಧ ಇಲಾಖೆಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಆಗಮಿಸುವರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಖಜಾಂಚಿ ವೆಂಕಟೇಸ ಕುಲಕರ್ಣಿ, ಗೌರವ ಅಧ್ಯಕ್ಷರಾದ ಸುಧಾಕರ ಡಿ.ಜಿ. ,
          ಪ್ರಧಾನ ಕಾಯ್ದರ್ಶಿ ಶಂಖರಗೌಡ ಮಾಲಿಪಾಟಿಲ್, ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ, ರಾಜ್ಯ ಜಂಟಿ ಕಾರ್ಯದರ್ಶಿ ಎಸ್.ಎಸ್.ಸುಂಕದ, ರಾಜ್ಯ ಸಂಘಟನಾ ಕಾರ್ಯದರ್ಶೀ ಜಯತೀರ್ಥ ದೇಸಾಯಿ, ರಾಜ್ಯ ಪರಿಷತ್ ಸದಸ್ಯರಾದ ಗೋಪಾಲ ದುಬೆ, ಕ್ರೀಡಾ ಕಾರ್ಯದರ್ಶಿ ಅವಿನಾಶ ಎಂ, ಶರಣಬಸಪ್ಪ ಮಣ್ಣೂರು,  ಸಾಂಸ್ಕೃತಿಕ ಕಾರ್ಯದರ್ಶಿ ರಾಮಣ್ಣ ಶಾವಿ, ರಾಮಣ್ಣ ಕಳ್ಳಿಮನಿ, ಸೇರಿದಂತೆ ಜಿಲ್ಲಾ ಶಾಖೆ, ತಾಲ್ಲೂಕಾ ಘಟಕಗಳು, ಯೋಜನಾ ಘಟಕ ಮುನಿರಾಬಾದನ ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು  ಉಪಸ್ಥಿತರಿರುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಸರ್ಕಾರಿ ನೌಕರರ ಕ್ರೀಡಾಕೂಟ ಸಂಘಟನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ವಿಠ್ಠಲ್ ಜಾಬಗೌಡರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!