WhatsApp Image 2024-06-08 at 4.30.01 PM

ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಿರಿ : ವೈ.ಎಂ. ಸತೀಶ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 8- ಗುಣಮಟ್ಟದ ಶಿಕ್ಷಣ ಬೋಧನೆಗೆ ಆದ್ಯತೆ ನೀಡಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕರೆ ನೀಡಿದ್ದಾರೆ.

ವೀರಶೈವ ವಿದ್ಯಾವರ್ಧಕ ಸಂಘದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ದಾನಿಗಳ ದಿನಾಚರಣೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಈ ಕೊರತೆಯನ್ನು ನಿವಾರಣೆ ಮಾಡುವ ಜವಾಬ್ದಾರಿ ಭವಿಷ್ಯದ ಶಿಕ್ಷಕರ ಮೇಲಿದೆ. ಪ್ರಶಿಕ್ಷಣಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಬೋಧಿಸಲು ಆದ್ಯತೆ ನೀಡಬೇಕು. ಅಲ್ಲದೇ, ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಬೇಕು ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಬೆಳವಣಿಗೆಯಲ್ಲಿ ದಾನಿಗಳ ಪಾತ್ರ ದೊಡ್ಡದು. ದಾನಿಗಳ ದಾನವು ಅರ್ಥಪೂರ್ಣವಾಗಿ ಉಪಯೋಗ ಆಗಬೇಕು. ದಾನದ ಆಸ್ತಿಪಾಸ್ತಿಗಳನ್ನು ಸಂರಕ್ಷಣೆ ಮಾಡಬೇಕು, ಈ ನಿಟ್ಟಿನಲ್ಲಿ ಸಂಘ ನೀಡುವ ಜವಾಬ್ದಾರಿಗಳನ್ನು ನಿರ್ವಹಿಸುವೆ ಎಂದು ಹೇಳಿದರು.

ಹೇಮಕೂಟ ಶೂನ್ಯ ಸಿಂಹಾಸನಾಧೀಶ್ವರ ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು, ಪ್ರಶಿಕ್ಷಣಾರ್ಥಿಗಳು ತರಗತಿಯಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಏಕಾಗ್ರತೆಯನ್ನು ಸಾಧಿಸುವ ಕೌಶಲ್ಯಗಳನ್ನು ಕಲಿಯಲು ಆದ್ಯತೆ ನೀಡಬೇಕು. ಭವಿಷ್ಯಕ್ಕೆ ಬೇಕಾಗಿರುವ ಗುಣಮಟ್ಟದ ಶಿಕ್ಷಣ ಬೋಧನೆಗೆ ಪ್ರಶಿಕ್ಷಣಾರ್ಥಿಗಳು ತಾಳ್ಮೆ, ಸಂಯಮದ ಜೊತೆಯಲ್ಲಿ ದೇಶಕಟ್ಟುವ ಜವಾಬ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಆಶೀರ್ವಚನ ಮಾಡಿದರು.

ಸ್ವಾತಂತ್ರ‍್ಯಪೂರ್ವದಿAದಲೂ ಜಾತ್ಯಾತೀತವಾಗಿ ಶಿಕ್ಷಣ ಸೇವೆ ಸಲ್ಲಿಸಿ, ದೇಶವನ್ನು ನಿರ್ಮಾಣ ಮಾಡುವ ಜವಾಬ್ದಾರಿಯನ್ನು ವೀರಶೈವ ವಿದ್ಯಾವರ್ಧಕ ಸಂಘ ಮತ್ತು ವೀರಶೈವ ಮಠಗಳು – ಸಂಸ್ಥೆಗಳು ಸಮರ್ಥವಾಗಿ ನಿರ್ವಹಿಸಿವೆ ಮತ್ತು ಈಗಲೂ ನಿರ್ವಹಿಸುತ್ತಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅವರು, ದಾನಿಗಳು ನೀಡಿರುವ ದಾನವನ್ನು ಸಂರಕ್ಷಣೆ ಮಾಡಲು ಆದ್ಯತೆ ನೀಡಿ, ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಣೆ ಮಾಡಿ ದಾನವನ್ನು ಅರ್ಥಪೂರ್ಣವಾಗಿ ಸ್ಮರಿಸಲಾಗುತ್ತದೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಟಿ. ಕೊಟ್ರಪ್ಪ ಅವರು, ದಾನಿಗಳ ದಾನದ ಕುರಿತು ಭವಿಷ್ಯದ ಪೀಳಿಗೆ ತಿಳಿಯಬೇಕು. ಈ ನಿಟ್ಟಿನಲ್ಲಿ ದಾನಿಗಳ ದಿನಾಚರಣೆ ಅರ್ಥಪೂರ್ಣ ಆಚರಿಸಲ್ಪಡುತ್ತಿದೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ದರೂರು ಶಾಂತನಗೌಡ ಅವರು, ವೀರಶೈವ ವಿದ್ಯಾವರ್ಧಕ ಸಂಘ ಹುಟ್ಟಿ – ಬೆಳೆದಿರುವುದೇ ದಾನಿಗಳ ನಿಸ್ವಾರ್ಥ ಸೇವೆಯಿಂದ. ದಾನಿಗಳ ನಿಸ್ವಾರ್ಥ ದಾನವನ್ನು ಸ್ಮರಿಸುವ ಮೂಲಕ ಅವರನ್ನು ಮತ್ತು ಅವರ ಸೇವೆಯನ್ನು ಸ್ಮರಿಸುವುದೇ ಅವರ ಸೇವೆಗೆ ಕೃತಜ್ಞತೆಗಳನ್ನು ಸಲ್ಲಿಸಿದಂತೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಂದು ಡಾ. ಅರವಿಂದ ಪಾಟೀಲ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಜಾ ವಿಧಿಯನ್ನು ಬೋಧಿಸಿದರು. ಬಿಎಡ್ ನಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿ ರುದ್ರೇಶ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿದಾಗ, ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವ್ಯಕ್ತಿತ್ವ ಮತ್ತು ವಿಕಸನದ ಅಭಿವೃದ್ಧಿಗೆ ಪೂರಕ ಬೋಧನೆ ಸಿಗುತ್ತಿದೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಜಾನೆಕುಂಟೆ ಬಸವರಾಜ್, ಖಜಾಂಚಿ ಬೈಲುವದ್ದಿಗೇರಿ ರ‍್ರಿಸ್ವಾಮಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ನರೇಂದ್ರಬಾಬು ಅವರು ಅತಿಥಿಗಳಾಗಿ ವೇದಿಕೆಯಲ್ಲಿದ್ದರು.

ವಿದ್ಯಾರ್ಥಿ ಅಮಿತ್ ಪ್ರಾರ್ಥನೆ ಸಲ್ಲಿಸಿದರು. ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸತೀಶ್ ಎ. ಹಿರೇಮಠ ಸ್ವಾಗತಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಶರಣಬಸವನಗೌಡ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಶಿಕ್ಷಣಾರ್ಥಿ ಭಾಗ್ಯಶ್ರೀ ಅವರು ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.

Leave a Reply

Your email address will not be published. Required fields are marked *

error: Content is protected !!