
ವಿಜಯನಗರ ಜಿಲ್ಲೆಯಲ್ಲಿ ಜ.26ರಿಂದ ಫೆ.23ರವರೆಗೆ
ಸಂವಿಧಾನ ಜಾಗೃತಿ ಜಾಥಾ: ಮಂಜುನಾಥ ಹೆಚ್.ವಿ.
ಕರುನಾಡ ಬೆಳಗು ಸುದ್ದಿ
ವಿಜಯನಗರ,23- ಸಂವಿಧಾನ ಜಾಗೃತಿ ಜಾಥವು ವಿಜಯನಗರ ಜಿಲ್ಲೆಯಲ್ಲಿ 137 ಗ್ರಾಮ ಪಂಚಾಯತಿಗಳಿಗೆ, 08 ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆÀ ಜನವರಿ 26 ರಿಂದ ಫೆ.23ರವರೆಗೆ ಒಟ್ಟು 28 ದಿನಗಳ ಕಾಲ ಸಂಚರಿಸಲಿದೆ ಎಂದು ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ ಹೆಚ್.ವಿ. ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಜನರು ಹಾಗೂ ಎಲ್ಲಾ ಸಮುದಾಯದ ಸಂಘ-ಸAಸ್ಥೆಗಳ ಮುಖಂಡರುಗಳು ಸಂವಿಧಾನದ ಮಹತ್ವ ಅರಿತುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಭಾರತ ದೇಶವು 75ನೇ ಗಣರಾಜ್ಯೋತ್ಸವನ್ನು ಜನವರಿ 26, 2024 ರಂದು ಆಚರಿಸುತ್ತಿದೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರದಿಂದ ಭಾರತದ ಸಂವಿಧಾನದ ಪೀಠಿಕೆಯನ್ನು ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ಬೆಳಗ್ಗಿನ ಪ್ರಾರ್ಥನ ಸಮಯದಲ್ಲಿ ಓದಲು ಆದೇಶಿಸಲಾಗಿರುತ್ತದೆ. ಇದರ ಭಾಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳನ್ನು ಈಡೇರಿಸುವ ಹಾಗೂ ಸಮ ಸಮಾಜವನ್ನು ನಿರ್ಮಿಸುವ ದ್ಯೇಯೋದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಎಂಬ ರಾಷ್ಟಿçÃಯ ಮಟ್ಟದ ಸಮಾವೇಶ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಜನವರಿ 26 2024 ರಂದು ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಗುತ್ತಿದೆ. ಅದರಂತೆ ವಿಜಯನಗರ ಜಿಲ್ಲೆಯಲ್ಲಿ ಜನವರಿ 26ರಂದು ಸಂವಿದಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಜಾಥದಲ್ಲಿ ಸಮಸಮಾಜದ ತತ್ವಪ್ರತಿಪಾದಕರಾದ ಬುದ್ದ, ಬಸವ, ಅಂಬೇಡ್ಕರ್‌ರವರ ಸ್ಥಬ್ದಚಿತ್ರ, ಸಂವಿಧಾನದ ಪೀಠಿಕೆ ಹಾಗೂ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಪ್ರದರ್ಶಿಸುವ ಹಂಪಿಯ ಕಲ್ಲಿನ ರಥ, ಉಗ್ರನರಸಿಂಹ ಮೂರ್ತಿ ಹಾಗೂ ವಿಜಯನಗರ ಸಾಮ್ರಾಜ್ಯದ ರಾಜ ಲಾಂಛನದ ಸ್ಥಬ್ದಚಿತ್ರಗಳನ್ನು ಅಳವಡಿಸಲಾಗಿದೆ. ಜಾಥದಲ್ಲಿ ಎಲ್‌ಇಡಿ ಮೌಂಟೆಡ್ ಡಿಸ್ಪ್ಲೆ ಮೂಲಕ ಸಂವಿಧಾನದ ಮಹತ್ವ, ರಾಜ್ಯನಿರ್ದೇಶಕ ತತ್ವಗಳು, ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯಕ್ಕೆ ಸಂಬಂಧಿಸಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ, ಬಸವಣ್ಣನವರ ವಚನಗಳು ಮತ್ತು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಸಾರ್ವಜನಿಕರಿಗೆ ಮುಖ್ಯವಾಗಿ ಯುವಜನರಿಗೆ ಅರಿವು ಮೂಡಿಸಲಾಗುವುದು.
ಸಂವಿಧಾನದ ಪೀಠಿಕೆಯ ಪ್ರತಿಗಳನ್ನು ಮೆರವಣಿಗೆಯ ಉದ್ದಕ್ಕೂ ವಿತರಿಸುತ್ತಾ, ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತದೆ. ರಾಜ್ಯವು ತನ್ನ ಆರ್ಥಿಕ ಸಾಮರ್ಥ್ಯ ಮತ್ತು ಅಭಿವೃದ್ದಿಯ ಪರಿಮಿತಿಯಲ್ಲಿ ಉದ್ಯೋಗ, ಶಿಕ್ಷಣ ಹಕ್ಕುಗಳನ್ನು ಪಡೆಯಲು ಹಾಗೂ ನಿರುದ್ಯೋಗ, ವೃದ್ಯಾಪ್ಯ, ಅನಾರೋಗ್ಯ ಮತ್ತು ಅಸಮರ್ಥತೆಯ ಸಂದರ್ಭಗಳಲ್ಲಿ ಸಹಾಯ ನೀಡಲು ಪರಿಣಾಮಕಾರಿ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿಯ 5 ಖಾತ್ರಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ, ಸ್ತೀ-ಶಕ್ತಿ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಅರಿವು ಮೂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.