WhatsApp Image 2024-01-24 at 6.41.49 PM

ಸಚಿವ ಜಮೀರ್ ಅಹ್ಮದ್ ಖಾನ್ ಅವರಿಂದ ಜನತಾ ದರ್ಶನ ಯಶಸ್ವಿ

ಜನತಾ ದರ್ಶನ ಕಾರ್ಯಕ್ರಮ ದಲ್ಲಿ ಸಂಗೀತ ಕಾರ್ಯಕ್ರಮ..! | ಕ್ಷಮೆ ಕೇಳಿದ ಸಚಿವ ಜಮೀರ್ ಅಹಮದ್

ಕರುನಾಡ ಬೆಳಗು ಸುದ್ದಿ

ವಿಜಯನಗರ,24- ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಂದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು.

ಕಮಲಾಪುರದ ಹೊಟೆಲ್ ಮಯೂರ ಭುವನೇಶ್ವರಿ ಆವರಣದಲ್ಲಿ ನಡೆದ ಕಮಲಾಪುರ ಪಟ್ಟಣದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರಾದ ಹೆಚ್.ಆರ್.ಗವಿಯಪ್ಪ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಅವರ ಸಮ್ಮುಖದಲ್ಲಿ ಸಚಿವರು ಸಾರ್ವಜನಿಕರ ಅಹವಾಲು ಆಲಿಸಿದರು.   10.30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ 1.40 ಜನತಾ ದರ್ಶನ ಘಂಟೆಗೆ ಶುರುವಾಯಿತು. ಸಚಿವರ ಬರುವಕ್ಕೆ ವಿಳಂಬವಾಗಿದ್ದರಿಂದ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಊಟ ನೀರಿಲ್ಲದೇ ಸಚಿವರ ಬರುವಿಕೆಗಾಗಿ ಕಾದು ಕುಳಿತು ಸುಸ್ತಾಗಿಹೋದ ಜನ ಸ್ತೋಮ. ಸಚಿವರ ನಡೆಗೆ ಜನರು ನಿರಸ ವ್ಯಕ್ತಪಡಿಸಿದರು. ತಡವಾಗಿ ಬಂದಿದ್ದಕ್ಕೆ ನೆರೆದಿದ್ದವರಿಗೆ ಕೈಮುಗಿದು ಕ್ಷಮೆ ಕೋರಿದರು.

ಕಮಲಾಪುರ ಸೇರಿದಂತೆ ಸೀತಾರಾಮ ತಾಂಡ, ಬುಕ್ಕಸಾಗರ, ವೆಂಕಟಾಪುರ, ಕಡ್ಡಿರಾಂಪುರ, ಮಲಪನಗುಡಿ ಸೇರಿ ದಂತೆ ವಿವಿಧ ಗ್ರಾಮಗಳಿಂದ ಬಂದು ಅಹವಾಲುಗಳನ್ನು ಸಲ್ಲಿಸಿದರು. ಕೆಲವು ಅಹವಾಲುಗಳ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿ ಪರಿಹಾರ ಕಲ್ಪಿಸಿದರು. ಇನ್ನು ಕೆಲವು ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾಯನಿರ್ವಹಣಾಧಿ ಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕಾಗಿ ಸಂಭಂದಿಸಿದ ಇಲಾಖೆಗಳಿಗೆ ವರ್ಗಾಯಿಸಿದರು.

ಸ್ಥಳದಲ್ಲಿಯೇ ಆದೇಶ ಪತ್ರ ವಿತರಣೆ: ಜನತಾ ದರ್ಶನದಲ್ಲಿ ಸಾರ್ವಜನಿಕರು ತಮ್ಮ ಅಹವಾಲು ಅರ್ಜಿಗಳನ್ನು ಸಲ್ಲಿಸುವ ಮುನ್ನ ಕೌಂಟರನಲ್ಲಿ ನೋಂದಾಯಿಸಲು ವ್ಯವಸ್ಥೆ ಮಾಡಿಸಲಾಗಿತ್ತು. ಬೆಳಗ್ಗೆ ಅರ್ಜಿ ಸಲ್ಲಿಸಿದ ಗೋಸಮ್ಮ ಅವರು ವಿದವಾ ವೇತನ ಮಾಸಾಶನ ಆದೇಶ, ಅಶ್ವತ್ಥಮ್ಮ ಅವರು ಸಂದ್ಯಾ ಸುರಕ್ಷಾ ಮಾಸಾಶನ, ವಿಕಲಚೇತನ ಹುಲಗಪ್ಪ ಅವರು ಅಂಗವೀಕಲ ಪೋಷಣಾ ಮಾಸಾಶನ ಆದೇಶ ಪತ್ರಗಳನ್ನು ಸಚಿವರಿಂದ ಪಡೆದರು. ನಿವಾಸಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಈ ನಿವಾಸಿಗಳ ಎಲ್ಲ ಮನೆಗಳಿಗೆ ಹಾಕಿರುವ ದಂಡವನ್ನು ರದ್ದು ಮಾಡಿ ಮೀಟರ್ ಅಳವಡಿಸಲು ಕ್ರಮ ವಹಿಸಬೇಕು. ಪಟ್ಟಾ ಇಲ್ಲದ ಮನೆಗಳಿಗೆ ಪಟ್ಟಾ ಒದಗಿಸಲು ಪರಿಶೀಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಅರ್ಜಿಗಳ ನೋಂದಣಿ: ಕಂದಾಯ ಇಲಾಖೆಗೆ ಹೆಚ್ಚಿನ ಅರ್ಜಿಗಳು ಸ್ವೀಕೃತವಾದವು. ಇನ್ನುಳಿದಂತೆ ಜಿಲ್ಲಾ ಪಂಚಾಯತ್‌ಗೆ 41, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 11, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆಗೆ ತಲಾ 1, ಆರೋಗ್ಯ ಇಲಾಖೆಗೆ 6 ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಭಂದಿಸಿದ ಅರ್ಜಿಗಳ ನೋಂದಣಿಗೆ ವ್ಯವಸ್ಥೆ ಮಾಡಲಾಗಿತ್ತು.

ಜನರೊಂದಿಗಿರುವೆ: ಈ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಸಚಿವರು, ಜನತಾ ದರ್ಶನ ಕಾರ್ಯಕ್ರಮವು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಮಹತ್ವದ ಕಾರ್ಯಕ್ರಮವಾಗಿದೆ. ಆಡಳಿತವು ಜನರ ಮನೆಬಾಗಿಲಿಗೆ ಹೋಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಲ್ಪಿಸಿ ಬದುಕುವ ವಿಶ್ವಾಸ ತುಂಬುತ್ತೇವೆ ಎಂದು ತಿಳಿಸಿದರು. ಹಂಪಿ ಉತ್ಸವದಲ್ಲಿ ನಮ್ಮ ಜಿಲ್ಲೆಯ ಹೆಚ್ಚಿನ ಕಲಾವಿದರಿಗೆ ಕಾರ್ಯಕ್ರಮ ಕೊಡಲು ಅವಕಾಶ ನೀಡಿದ್ದೇವೆ. ಹಂಪಿ ಉತ್ಸವ ಯಶಸ್ವಿಯಾಗಿ ನಡೆಯಲು ಎಲ್ಲರೂ ಸಹಕಾರ ಕೊಡಬೇಕು ಎಂದು ತಿಳಿಸಿದರು.

ಶಾಸಕರಾದ ಎಂ.ಪಿ.ಲತಾ ಅವರು ಹಂಪಿ ಉತ್ಸವದ ಬಗ್ಗೆ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ಅವರು ಮಾತನಾಡಿ, ಜನತಾ ದರ್ಶನ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಬಹುತೇಕ ಜನರಿಗೆ ಸ್ಥಳದಲ್ಲಿಯೇ ಪರಿಹಾರ ದೊರೆತು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದಂತೆ, ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಗೊಂಡ ಅರ್ಜಿಗಳ ಬಗ್ಗೆ ಹಂತಹಂತವಾಗಿ ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು. ಅಗತ್ಯವಿದ್ದಲ್ಲಿ ಮುಖ್ಯಮಂತ್ರಿಗಳ ಕಚೇರಿಗೆ ಸಹ ಅರ್ಜಿಗಳನ್ನು ಸಲ್ಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕರಲ್ಲಿ ಮನವಿ: ಹಂಪಿ ಉತ್ಸವ ಜನರ ಉತ್ಸವವಾಗಿದೆ. ರಾಜ್ಯದ ಉತ್ಸವವಾಗಿದೆ. ಫೆ.2, ಫೆ.3 ಮತ್ತು ಫೆ.4ರಂದು ನಡೆಯುವ ಉತ್ಸವಕ್ಕೆ ಸಾರ್ವಜನಿಕರು ಆಗಮಿಸಲು 100 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 60 ಎಕರೆ ಪ್ರದೇಶವನ್ನು ತಾತ್ಕಾಲಿಕ ಪಾರ್ಕಿಂಗ್ ಮಾಡಲು ಸಹಕರಿಸಿದ ಜಮೀನುದಾರರಿಗೆ ಅಭಿನಂದನೆ ಹೇಳುವೆ. ಹಂಪಿ ಉತ್ಸವಕ್ಕೆ ಪ್ರತಿಯೊಬ್ಬರು ಸಹ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾಡಳಿತವು ಈ ಬಾರಿ ಹಂಪಿ ಉತ್ಸವವನ್ನು ಜನೋತ್ಸವವನ್ನಾಗಿ ಮಾಡುವ ಸದಾಶಯ ಹೊಂದಿದೆ. ಈ ದಿಶೆಯಲ್ಲಿ ಈ ವರ್ಷ ಕೆಲವು ಹೊಸ ಹೊಸ ಕಾರ್ಯಕ್ರಮ ರೂಪಿಸಿದ್ದೇವೆ. ಮೊದಲನೇ ದಿನ ಎತ್ತುಗಳ ಪ್ರದರ್ಶನ, 2ನೇ ದಿನ ಕುರಿಗಳ ಪ್ರದರ್ಶನ, 3ನೇ ದಿನ ಶ್ವಾನಗಳ ಪ್ರದರ್ಶನ, ಸಿರಿಧಾನ್ಯ ಪಾಕ ಸ್ಪರ್ಧೆ, ಮಕ್ಕಳ ಕಾರ್ಯಕ್ರಮಗಳು ಸಹ ನಡೆಯಲಿವೆ. ಎಲ್ಲರೂ ಭಾಗಿಯಾಗಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಕೋರಿದರು.

ಪೊಲೀಸ್ ಬಂದೋಬಸ್ತ್: ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಪೊಲೀಸ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನರಾಜ್ ಸಿಂಗ್, ಜಿಲ್ಲಾ ಪಂಚಾಯತ್ ಸಿಇಓ ಸದಾಶಿವ ಪ್ರಭು ಬಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು, ಸಚಿವರ ಮಾಧ್ಯಮ ಸಲಹೆಗಾರರಾದ ಲಕ್ಷ್ಮಿ ನಾರಾ ಯಣ, ಹೊಸಪೇಟೆ ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ, ಹರಪನಹಳ್ಳಿ ಸಹಾಯಕ ಆಯುಕ್ತರಾದ ಪ್ರಕಾಶ, ತಹಸೀಲ್ದಾರರಾದ ಅಜಿತ್ ಮೆಹತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಶಿಕ್ಷಕರಾದ ಬಸವರಾಜ ಅಕ್ಕಿ ನಿರೂಪಿಸಿದರು. ಬಿಇಓ ಎಂ.ಚನ್ನಬಸಪ್ಪ ವಂದಿಸಿದರು. ಕಮಲಾಪುರ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!