WhatsApp Image 2024-04-26 at 4.11.43 PM

ಜಾತಿ ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ : ಶಾಸಕ ಬಸವರಾಜ ರಾಯರೆಡ್ಡಿ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 26- ರಾಜ್ಯದಲ್ಲಿ ಬಿಜೆಪಿ ಪಕ್ಷ ಜಾತಿ .ಮತ್ತು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ಈ ರಾಜ್ಯದ ಜನತೆಗೆ ನಾವು ಚುನಾವಣೆಯ ಪೂರ್ವದಲ್ಲಿ 5 ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ ಅದರಂತೆ ನಂತರ ನಾವು ಅಧಿಕಾರಕ್ಕೆ ಬಂದ ಕೂಡಲೆ ಕೊಟ್ಟ ಮಾತನಂತೆ ನಾವು ನುಡಿದಂತೆ ನಡೆದುಕೊಂಡಿದ್ದೇವೆ ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಮುಟ್ಟಿಸುವಂತ ಕೆಲಸ ಮಾಡಿದ್ದೇವೆ ನಮ್ಮ ಅಭಿವೃದ್ಧಿ ನೋಡಿ ನೀವು ಮತ ನೀಡಿ ಎಂದು ಶಾಸಕ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಕರಮುಡಿ .ಮ್ಯಾಗೇರಿ ಗ್ರಾಮದ ಲ್ಲಿ ಕೊಪ್ಪಳ ಲೋಕಸಭಾ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹಿಂದೆ ದೇಶದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಯಾಗಿದ್ದಾಗ ಆಹಾರ ಭದ್ರತೆ ಕಾಯ್ದೆ. ಮತ್ತು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಿದ್ದು ಕೇಂದ್ರದ ಕಾಂಗ್ರೆಸ್ ಸರಕಾರ ಕಾಂಗ್ರೆಸ ಪಕ್ಷ ಬಡವರ ಮತ್ತು ಎಲ್ಲಾ ಸಮುದಾಯದವರ ಏಳಿಗೆಗೆ ಮತ್ತು ರಾಷ್ಟ್ರದ ಹಿತಕ್ಕೆ ಶ್ರಮಿಸುತ್ತಾ ಬಂದಿದೆ.

ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ.ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಯಾವೊಂದು ಸೌಲಭ್ಯ ಇರಲಿಲ್ಲ. ಕರೆಂಟ್, ಶಾಲೆ, ಕಾಲೇಜ್ ರಸ್ತೆ, ಆಹಾರ ಹೀಗೆ ಮೂಲಭೂತ ಸೌಲಭ್ಯ ಇರಲಿಲ್ಲ. ದೇಶಕ್ಕೆ ಕಾಂಗ್ರೆಸ್ ಇವುಗಳೆನ್ನೆಲ್ಲಾ ನೀಡಿದೆ. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾ ಪ್ರಜಾ ಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿದೆ. ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುತ್ತದೆ.

ಜಾತಿ ವ್ಯವಸ್ಥೆಯನ್ನು ಹೆಚ್ಚಿಸುತ್ತಿದೆ. ಒಡಕು ತರುವ ಕೆಲಸ ಮಾಡುತ್ತಿದೆ. ಬಿಜೆಪಿ ಸುಳ್ಳು ಭರವಸೆ ನಂಬಬೇಡಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನು ಸೃಷ್ಟಿಸಿಲ್ಲ. ಆದ್ದರಿಂದ ಬಿಜೆಪಿಯ ಸುಳ್ಳು ಭರವಸೆಗಳಿಗೆ ನಂಬಿ ಮತ ಹಾಕದೆ ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಪ್ರಜಾಪ್ರಭುತ್ವದ ಸ್ಥಾಪನೆಗೆ ಕಾಂಗ್ರೆಸ್ ಶ್ರಮಿಸಿದೆ.

ಕಾಂಗ್ರೆಸ್‌ ನೇತೃತ್ವದಲ್ಲಿ ಅಂಬೇಡ್ಕರ್‌ಭಾರತಕ್ಕೆ ಸಂವಿಧಾನ ನೀಡಿ ದರು. ಅಂದು ಅವರು ನೀಡಿದ ಸಂವಿಧಾನದ ಕೊಡುಗೆಯಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಸದೃಢ ಆಗಿದೆ. ನಂತರ ಮಾತನಾಡಿದ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರದ ಬಸವರಾಜ ರಾಯರಡ್ಡಿ ಮಾತನಾಡಿ ಕ್ಷೇತ್ರದಲ್ಲಿ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಬೇರೆ ಪಕ್ಷದಲ್ಲಿ ಇದು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ ಜನತೆಗೆ ಮತ್ತೇ 5 ಗ್ಯಾರಂಟಿ ಘೋಷಣೆ ಮಾಡಿದ್ದು, ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೊಳಿಸಲಿದೆ. ಉಚಿತ ಯೋಜನೆಗಳಿಂದ ಲಕ್ಷಾಂತರ ಬಡ ಜನರಿಗೆ ಉಪಯೋಗವಾಗಲಿದೆ. ಆದ್ದರಿಂದ ಜನರು ಅಭಿವೃದ್ಧಿಯ ಪರ ನಿಂತಿರುವ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಉಳ್ಳಾಗಡ್ಡಿ, ಹನುಮಂತಗೌಡ ಚಂಡೊರು, ಯಂಕಣ್ಣ ಯರಾಶಿ,  ಕೆರಿಬಸಪ್ಪ ನಿಡಗುಂದಿ, ವೀರನಗೌಡ್ರ ಪೋಲೀಸ್ ಪಾಟೀಲ, ಅಡಿವಪ್ಪ ಭಾವಿಮನಿ, ಅಂದಾನಗೌಡ ಪೋಲಿಸ್ ಪಾಟೀಲ, ಪಕ್ಷದ ವಕ್ತಾರ ಡಾ.ಶಿವನಗೌಡ ದಾನರಡ್ಡಿ, ರೇವಣಪ್ಪ ಸಂಗಟಿ, ಸಂಗಮೇಶ ಗುತ್ತಿ, ಶರಣಪ್ಪ ಗಾಂಜಿ,  ಮಲ್ಲು ಜಕ್ಕಲ್ಲಿ, ಸುಧೀರ್ ಕೂಲ೯ಹಳ್ಳಿ, ಹೇಮರೆಡ್ಡಿ ರಡ್ಡೇರ್, ಮಮತಾಜ್ ಬೇಗಂ, ಗ್ರಾಮ ಪಂಚಾಯತಿ ಅಧ್ಯಕ್ಷರು ಮಮತಾಜ್ ಬಿ ಹಿರೇಮನಿ, ಹುಸನಸಾಬ್ ಹಿರೇಮನಿ ವಕೀಲರು, ಚಂದ್ರು ದೇಸಾಯಿ, ಮಹಾಂತೇಶ್ ಗಾಣಿಗೇರ, ಸಂಗಣ್ಣ ತೆಂಗಿನಕಾಯಿ, ಕಳಕಪ್ಪ ಕುರಿ, ಚನ್ನಸಂಗಪ್ಪ ಸಿಳ್ಳಿನ, ಶರಣಪ್ಪ ಪುರ್ತಗೆರಿ, ಶರಣಪ್ಪ ಹವಲ್ದಾರ ಗ್ರಾಮಸ್ಥರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಗ್ರಾಮ ಪಂಚಾಯತಿ ಸರ್ವ ಸದಸ್ಯರು ಮುಖಂಡರು. ಕಾರ್ಯ ಕತ೯ರು ಮತ್ತು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!