ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ:
ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕರುನಾಡ ಬೆಲಗು ಸುದ್ದಿ
ಬಳ್ಳಾರಿ, ೦೭- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ತೊಡಗಿಕೊಂಡು ಕ್ರೀಡೆಯ ಅಭಿವೃದ್ದಿಗೆ ನೆರವು ನೀಡಿ 5 ವರ್ಷಗಳ ಕಾಲ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2022 ನೇ ಸಾಲಿನಲ್ಲಿ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ ಜೀವಮಾನ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಆಸಕ್ತರು ನ.27ರೊಳಗೆ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ಸೈಟ್ (https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ರಂಗಮಂದಿರ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ