
ತಾಲ್ಲೂಕು ಮಟ್ಟದ ವಿ ಆರ್ ಡಬ್ಲ್ಯೂಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ಕೊಪ್ಪಳ ತಾಲೂಕು ಪಂಚಾಯತ್ ಹಾಗೂ ತಾಲೂಕು ಸ್ವಿಪ್ ಸಮಿತಿ ವತಿಯಿಂದ ತಾಲೂಕು ಮಟ್ಟದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮತದಾನದ ಜಾಗೃತಿ ಕಾರ್ಯಕ್ರಮ ಮಂಗಳವಾರದAದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಪ್ರತಿಜ್ಞಾ ವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ, ಆರ್ ಸಿಡಿಪಿಓ ಜಯಶ್ರೀ, ಜಿಲ್ಲಾ ಅಂಗವಿಕಲ ಕಲ್ಯಾಣಾ ಧಿಕಾರಿಗಳು ಶಿವಶರಣಪ್ಪ ಗದ್ದಿ, ಚುನಾವಣೆ ರಾಯಭಾರಿ ಪೂರ್ಣಿಮಾ ಏಳುಬಾವಿ ಮತ್ತಿತ್ತರು ಉಪಸ್ಥಿತರಿದ್ದರು.