2c136fae-be38-4577-97e1-318669006cc9

ತೋಟಗಾರಿಕೆ ಇಲಾಖೆ : ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,27- ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.

ಸೌಲಭ್ಯಗಳು : ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು.

ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿ ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್‍ಲೈನ್ ಮೂಲಕ ಪಾವತಿ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡಲಾಗುವುದು.

ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲಾಗುವುದು. ಅರ್ಹ ರೈತರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!