
ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,27- ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024ರ ಮೇ 02 ರಿಂದ 2025 ರ ಫೆ.28 ರ ವರೆಗೆ ಒಟ್ಟು 10 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳ ಆಯ್ಕೆ ಗುರಿ : ಮಹಿಳೆಯರು 8, ಪುರುಷರು 16, ಪರಿಶಿಷ್ಟ ಜಾತಿ 03, ಪರಿಶಿಷ್ಟ ಪಂಗಡ 01 ಮತ್ತು ಇತರೆ 20 ಅಭ್ಯರ್ಥಿಗಳು ಸೇರಿ ಒಟ್ಟು 24 ಅಭ್ಯರ್ಥಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಆಯ್ಕೆ ಮಾಡುತ್ತಾರೆ.
ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು. ಇತರರಿಗೆ 18 ವರ್ಷದಿಂದ 30 ವರ್ಷದೊಳಗೆ ಹಾಗೂ ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿರಬೇಕು.
ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಹೊಂದಲು ಬಯಸುವ ಅಭ್ಯರ್ಥಿಯ ತಂದೆ-ತಾಯಿ, ಪೆÇೀಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿಗಳನ್ನು ಮಾ.01 ರಿಂದ 30 ರ ವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಭರ್ತಿಮಾಡಿದ ಅರ್ಜಿಗಳನ್ನು ಏಪ್ರೀಲ್ 01 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಏಪ್ರೀಲ್ 06 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
ವಿಶೇಷ ಸೂಚನೆ : ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯು ಸರ್ಕಾರದ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಮೀಸಲಾತಿ ಮುಗಿದ ನಂತರ ಉಳಿಕೆ ಮೀಸಲಾತಿಗಳನ್ನು ಇತರೆ ಅಭ್ಯರ್ಥಿಗಳಿಗೆ ನೀಡಲಾಗುವುದು.