
ದಾಖಲೆ ಇಲ್ಲದೆ ಸಾಗಿಸುತ್ತಿದ್ದ
34 ಲಕ್ಷ ಹಣ ವಶಕ್ಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 19- ಜಿಲ್ಲೆಯ ಗಂಗಾವತಿ ತಾಲೂಕಿನ ಕಡೇಬಾಗಿಲು ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ 34 ಲಕ್ಷ ರೂ ಸಾಗಿಸುತ್ತಿದ್ದ ವೇಳೆ ಪೊಲೀಸರು ಮತ್ತು ತಹಶಿಲ್ದಾರ್ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಕಡೇಬಾಗಿಲು ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಿರಗುಪ್ಪ ತಾಲೂಕಿನ ನಡವಿಯಿಂದ ಹೊಸಪೇಟೆಗೆ ಕಾರಿನಲ್ಲಿ ಹಣ ಸಾಗಿಸಲಾಗುತಿತ್ತು ಎನ್ನಲಾಗಿದೆ.
ತಹಶಿಲ್ದಾರ್ ಯು.ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪೀರಸಾಬ ಎನ್ನುವವರ ಹಣ ಸಾಗಿಸುತ್ತಿದ್ದರು.ಹಣ ವಶಕ್ಕೆ ಪಡೆದು ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.