
ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ಶಿಬಿರ, ಮತದಾನ ಜಾಗೃತಿ ಅಭಿಯಾನ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 22- ತಾಲ್ಲೂಕಿನ ಬೆಳಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಗಲ್ಲು ತಾಂಡಾದಲ್ಲಿ ಸಾಮಾಜಿಕ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಮತದಾನ ಜಾಗೃತಿ ಅಭಿಯಾನ ನಡೆಯಿತು.
ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಮಾತನಾಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣ ಹೆಚ್ಚಳಕ್ಕೆ ವೈವಿಧ್ಯಮಯ ಮತದಾನ ಅರಿವು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 07 ರಂದು ನಡೆಯಲಿರುವ ಚುನಾವಣೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಚುನಾವಣೆಯ ಹಬ್ಬವನ್ನು ಯಶಸ್ವಿಗೊಳಿಸಿಬೇಕು ಎಂದರು.
ಮತದಾನ ಜಾಗೃತಿ ಅಭಿಯಾನದಲ್ಲಿ ಚುನಾವಣಾ ಘೋಷಣೆಗಳನ್ನು ಕೂಗುವ ಮೂಲಕ ತಪ್ಪದೇ ಮತದಾನ ಮಾಡುತ್ತೇನೆ ಎಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಉಚಿತ ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಆರ್.ಕೆ.ಬಸವರಾಜ್ ಸೇರಿದಂತೆ ಟಿಸಿ, ಟಿಎಂಐಎಸ್, ಟಿಐಇಸಿ, ಪಿಡಿಓ, ಟಿಎಇ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.