
ನರೇಗಾ ಯೋಜನೆ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ಮನವಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 30- ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ನರೇಗಾದಲ್ಲಿ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಗೆ ಸಂಘದ ತಾಲೂಕ ಅಧ್ಯಕ್ಷರಾದ ವಿ ಮಾರುತಿ ಖಜಾಂಚಿ ಬಿ ರಾಮಣ್ಣ ಸದಸ್ಯರಾದ ಹುಸೇನಪ್ಪ ಸಣ್ಣ ಹುಲುಗಪ್ಪ ಶಾಂತಮೂರ್ತಿ ಮೇಸ್ತ್ರಿ ಪ್ರಕಾಶ್ ಸಿ ರವಿಕುಮಾರ್ ದಿವಾಕರ್ ಬಸಪ್ಪ ಮತ್ತಿತರ ಸಮ್ಮುಖದಲ್ಲಿ ತಾಲೂಕ ಪಂಚಾಯತ್ ಕಾರ್ಯಾಲಯಕ್ಕೆ ತೆರಳಿ ತಾಲೂಕ ಪಂಚಾಯತ್ ವ್ಯವಸ್ಥಾಪಕಿ ಸುಜಾತ ಕೋರಿ ಅವರ ಮೂಲಕ ಮನವಿ ಪತ್ರ ಸಲ್ಲಿಸಿದರು.