1719489519912

ನಾಡಪ್ರಭು ಶ್ರೀ ಕೆಂಪೇಗೌಡರ ಆಡಳಿತ ಮಾದರಿಬ  : ಎಂ.ಎಸ್.ದಿವಾಕರ

ಕರುನಾಡ ಬೆಳಗು ಸುದ್ದಿ

ವಿಜಯನಗರ, 27- ವಿಜಯನಗರ ಸಾಮ್ರಾಜ್ಯದ ಆಡಳಿತದಿಂದ ಪ್ರಭಾವಿತರಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡರ ಆಡಳಿತವು ಇಂದಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 27ರಂದು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಕೆಂಪೇಗೌಡ ಅವರು ಅಂದಿನ ಕಾಲದಲ್ಲಿಯೇ ನೀರಿನ ಹಾಗೂ ಮಣ್ಣಿನ ಮಹತ್ವ ತಿಳಿದಿದ್ದರು. ವೈಜ್ಞಾನಿಕವಾಗಿ ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಕೊಡುಗೆ ನಮ್ಮ ನಾಡಿಗೆ ಅಪಾರವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಅವರು ಮಾತನಾಡಿ, ನಾಡಪ್ರಭು ಶ್ರೀ ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃ ಎನಿಸಿಕೊಂಡವರು. ನೀರಿನ ಮಹತ್ವ ಅರಿತು ದಾಖಲೆ ರೀತಿಯಲ್ಲಿ ಕೆರೆಗಳನ್ನು ನಿರ್ಮಿಸಿ ಸಾಧನೆ ತೋರಿದ್ದಾರೆ. ಅವರ ಆಡಳಿತ, ಸಾಧನೆ ನಮಗೆ ಸದಾಕಾಲ ಸ್ಫೂರ್ತಿದಾಯಕ. ಅವರು ಸಾಧಿಸಿದ ಕೆಲಸಗಳು ಇತರರಿಗೆ ಮಾದರಿಯಾಗಿವೆ ಎಂದು ತಿಳಿಸಿದರು.

ವಿಜಯನಗರ ಕಾಲೇಜ್‌ನ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ.ಹೆಚ್.ಎಂ.ಚAದ್ರಶೇಖರ ಶಾಸ್ತಿç ಅವರು ವಿಶೇಷ ಉಪನ್ಯಾಸ ನೀಡಿ, ಇತಿಹಾಸದ ಪುಟಗಳಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಒಬ್ಬ ರಾಜನ ಯಶಸ್ಸು ಸಿದ್ಧಾಂತದ ಬದಲು ಕಾರ್ಯಾನುಷ್ಠಾನಗೊಳಿಸುವುದರಲ್ಲಿ ಇರುತ್ತದೆ. ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದರು. ಶ್ರೀ ಕೃಷ್ಣದೇವಾರಾಯನ ಕಾಲದಲ್ಲಿ ದಸರಾ ಉತ್ಸವ ನೋಡಲು ಕೆಂಪೇಗೌಡರು ಚಿಕ್ಕ ವಯಸ್ಸಿನಲ್ಲಿ ತಂದೆಯ ಜೊತೆಗೆ ಬರುತ್ತಿದ್ದರು. ನಿರ್ದಿಷ್ಟ ನಗರ ಯೋಜನೆಯ ಜ್ಞಾನ ಹೊಂದಿದ್ದರು. ಕೃಷಿ, ನಿರಾವರಿಗಾಗಿ ಹೆಚ್ಚಿನ ಕೆರೆ ಕಾಲುವೆಗಳನ್ನು ನಿರ್ಮಿಸಿದ್ದಾರೆ. ಅವರು ತೆಲುಗು ಭಾಷೆಯಲ್ಲಿ ಸಹ ಪರಿಣಿತಿ ಹೊಂದಿದ್ದರು ಎಂದು ಹೇಳಿದರು.

ಸಮಾರಂಭದಲ್ಲಿ ಹೊಸಪೇಟೆ ತಹಶೀಲ್ದಾರ ವಿಶ್ವಜಿತ್ ಮೆಹತಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರೀಶ್, ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಹವಾಲ್ದಾರ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಬಹುಮಾನ ವಿತರಣೆ : ನಾಡಪ್ರಭು ಶ್ರೀ ಕೆಂಪೇಗೌಡರ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹೊಸಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜ್ ಚಿತ್ತವಾಡಿಗಿಯ ಹೆಚ್.ಕೆ.ವಿದ್ಯಾಪ್ರಿಯಾ ಹಾಗೂ ದ್ವಿತೀಯ ಸ್ಥಾನ ಪಡೆದ ಹೊಸಪೇಟೆ ಚಾರಿಟೇಬಲ್ ಪ್ರೌಢಶಾಲೆಯ ವಂದನಾ ಮತ್ತು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹೊಸಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜ್ ಚಿತ್ತವಾಡಿಗಿಯ ಶಾಂಭವಿ.ಎA. ಹಾಗೂ ದ್ವಿತೀಯ ಸ್ಥಾನ ಪಡೆದ ಹೊಸಪೇಟೆಯ ನ್ಯಾಷನಲ್ (ಆಂಗ್ಲ ಮಾಧ್ಯಮ) ಪ್ರೌಢಶಾಲೆಯ ಗುಜ್ಜಲ್ ಹಂಸ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಬಹುಮಾನ ವಿಜೇತ ವಿದ್ಯಾರ್ಥಿಗಳ ಸಾಧನೆಗೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಲಾಯಿತು.

Leave a Reply

Your email address will not be published. Required fields are marked *

error: Content is protected !!