5ad39b0c-f34b-4687-ba0d-75d901201b0a

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ: ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯ ಚುನಾವಣಾಧಿಕಾರಿ ವಿಡಿಯೋ ಸಂವಾದ ಸಭೆ
ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸಿಇಒ ಮನೋಜ್ ಕುಮಾರ್ ಮೀನಾ ಸೂಚನೆ

ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 17- ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರದಂದು, ಲೋಕಸಭೆ ಸಾರ್ವತ್ರಿಕ ಚುನಾವಣೆ – 2024ರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಿಂದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು.
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಕುರಿತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಬೇಕು. ಅದೇರೀತಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆಯ ಕುರಿತು ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು ಎಂದು ಆಯಾ ಜಿಲ್ಲಾ ಚುನಾವಣಾಧಿಕಾರಗಳಿಗೆ ನಿರ್ದೇಶನ ನೀಡಿದರು.
ಫ್ಲೈಯಿಂಗ್ ಸÁ್ಕ್ವ್ಯಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಚೆಕ್ ಪೆÇೀಸ್ಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಕಂಟ್ರೋಲ್ ರೂಂ ಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.
ಈಗಾಗಲೇ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಮಿತಿಗಳು ಎಂಸಿಸಿ, ಎಂಸಿಎಂಸಿ, ಸಾಮಾಜಿಕ ಜಾಲತಾಣ ವೀಕ್ಷಣೆ ಸೇರಿದಂತೆ ಇತರೆ ಸಮಿತಿಗಳು ಕಾರ್ಯ ಪ್ರವೃತ್ತಿಯಾಗಬೇಕು. ಇ-ಎಸ್‍ಎಂಎಸ್ ಬಗ್ಗೆ ಇನ್ನಷ್ಟು ತಿಳಿಯಿರಿ ಎಂದು ಸಲಹೆ ನೀಡಿದರ.

Leave a Reply

Your email address will not be published. Required fields are marked *

error: Content is protected !!