೧೧

                         ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ
                              ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕರುನಾಡ ಬೆಳಗು ಸುದ್ದಿ
ಬೆಂಗಳೂರು, 7 – ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ:

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು. ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೆರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.

ಪರಿಶೀಲನೆ ನಂತರ ಲೋಕಸಭಾ ಅಭ್ಯರ್ಥಿ ತೀರ್ಮಾನ:
ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಯತ್ನಾಳ್ ಶೇಮ್ ಲೆಸ್ ವ್ಯಕ್ತಿ
ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸು ಜಾರಿ ಮಾಡಿತ್ತು ಎಂದರು.

Leave a Reply

Your email address will not be published. Required fields are marked *

error: Content is protected !!