
ಮಕ್ಕಳಿಗೆ, ಪೋಷಕರಿಗೆ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ನ್ಯಾ.ರಾಜೇಶ್ ಎನ್.ಹೊಸಮನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, – ಬಾಲ್ಯ ವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಮಕ್ಕಳಿಗೆ ಮತ್ತು ಪೆÇೀಷಕರಿಗೆ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ‘ಬಾಲ್ಯವಿವಾಹ, ಪೆÇೀಕ್ಸೊ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ನೀತಿ 2016 (ಪರಿಷ್ಕರಣೆ-2023)’ ಕುರಿತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಸರ್ಕಾರಿ, ಅನುದಾನಿತ ಪ್ರೌಢಶಾಲೆಯ ಮುಖ್ಯ ಗುರುಗಳಿಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ನ ನಜೀರ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕೊಡಿಸಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸಿ ಸಮಾಜದಲ್ಲಿ ಸಮಾನತೆ ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು.
ಬಾಲ್ಯ ವಿವಾಹವು ಸಾಮಾಜಿಕ ಪಿಡುಗಾಗಿದ್ದು, ಹೆಣ್ಣು ಮಕ್ಕಳ ಮೇಲೆ ಮಾನಸಿಕ ಒತ್ತಡ ಮತ್ತು ದೈಹಿಕವಾಗಿ ದುಷ್ಪರಿಣಾಮ ಬೀರುತ್ತದೆ. ಈ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಕರು ಮಹತ್ವದ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ರಾಷ್ಟ್ರ ಸಮಗ್ರ ಅಭಿವೃದ್ಧಿ ಹೊಂದಲು ಆರ್ಥಿಕ, ತಾಂತ್ರಿಕ, ಶೈಕ್ಷಣಿಕದ ಜೊತೆಗೆ ಕಾನೂನಾತ್ಮಕವಾಗಿ ಹೆಣ್ಣುಮಕ್ಕಳ ಬೆಳವಣಿಗೆ ಮುಖ್ಯವಾಗುತ್ತದೆ ಎಂದರು.
13 ರಿಂದ 18 ವರ್ಷದೊಳಗಿನ ಮಕ್ಕಳನ್ನು ದಾರಿತಪ್ಪದಂತೆ ನೋಡಿಕೊಳ್ಳುವುದು ಪೆÇೀಷಕರ ಮತ್ತು ಶಿಕ್ಷಕರ ಕರ್ತವ್ಯವಾಗಿದೆ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದೇ ಶೈಕ್ಷಣಿಕವಾಗಿ ವಿದ್ಯಾವಂತರಾದಾಗ ಕುಟುಂಬದ ಏಳಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಬಾಲ್ಯ ವಿವಾಹ ನಿಯಂತ್ರಿಸಲು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೆÇೀಕ್ಸೋ ಕಾಯ್ದೆಯಡಿ ಸಮಾಲೋಚನೆ ಕೇಂದ್ರ ತೆರೆಯಲಾಗಿದ್ದು, ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸುವಂತೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಹಿಂಸೆ ಆದಾಗ ಅಥವಾ ತೊಂದರೆಗೆ ಒಳಗಾದಾಗ ಮೊದಲು ಶಿಕ್ಷಕರಿಗೆ ತಿಳಿಸಲು ಮುಂದಾಗುತ್ತಾರೆ, ವಿದ್ಯಾರ್ಥಿಗಳ ಮಾನಸಿಕ ಭಾವನೆಗಳನ್ನು ಶಿಕ್ಷಕರು ಅರಿತು ಮಕ್ಕಳಿಗೆ ಕಾನೂನಾತ್ಮಕ ನ್ಯಾಯ ಒದಗಿಸುವುವು ಅವರ ಕರ್ತವ್ಯವಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ಮಕ್ಕಳ ಸಮಸ್ಯೆಗಳನ್ನು ಅರಿತುಕೊಂಡು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ಒದಗಿಸಬೇಕು. ಸರ್ಕಾದ ಆದೇಶದಂತೆ ಪ್ರತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕು. ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ವರದಿ ನೀಡಬೇಕು. ಮಕ್ಕಳ ಬಗ್ಗೆ ಶಿಕ್ಷಕರು ಕಾಳಜಿ ವಹಿಸಬೇಕು ಎಂದು ಹೇಳಿದರು.
ಬಳಿಕ ಕೊಪ್ಪಳ ಯೂನಿಸೇಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್ ಅವರು ‘ಬಾಲ್ಯವಿವಾಹ, ಪೆÇೀಕ್ಸೊ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ನೀತಿ 2016 (ಪರಿಷ್ಕರಣೆ-2023)’ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ.ಎ.ಕೆ ಸಿಬ್ಬಂದಿ ಸೇರಿದಂತೆ ಕಾಲೇಜು ಪ್ರಾಂಶುಪಾಲರು, ಶಾಲಾ ಮುಖ್ಯೊಪಾಧ್ಯಾಯರು ಉಪಸ್ಥಿತರಿದ್ದರು.