ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳಗಣ್ಣನವರ್ ಆಯ್ಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,14- ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ನವೀನ ಗುಳಗಣ್ಣನವರ್ ಅವರು ಪಕ್ಷದ ಹೊಸ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ರಾತ್ರಿ ಪಕ್ಷದ ವರಿಷ್ಠರು ಈ ಕುರಿತು ಆದೇಶ ಹೊರಡಿಸಿದ್ದಾರೆ. ನವೀನ್ ಇದಕ್ಕೂ ಮೊದಲು ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮತ್ತು ಸದಸ್ವತ್ಯ ಅಭಿಯಾನ ಸಂಚಾಲಕರಾಗಿ ಕೆಲಸ ಮಾಡಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಹತ್ತು ಜನ ಆಕಾಂಕ್ಷಿಗಳಿದ್ದರೂ ನವೀನ್ ಹೆಸರು ಮುಂಚೂಣಿಯಲ್ಲಿತ್ತು. ಈ ಬಾರಿಯ ಜಿಲ್ಲಾಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ ಇಷ್ಟು ದಿನ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು.
ಜಿಲ್ಲಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಮಾಜಿ ಶಾಸಕರಾದ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗುರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ, ಕೊಪ್ಪಳದ ಚಂದ್ರಶೇಖರ ಕವಲೂರ ಸೇರಿದಂತೆ ಅನೇಕರು ಆಕಾಂಕ್ಷಿಗಳಾಗಿದ್ದರು.
