ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಿಲ್ಲ :
ಡಾ.ಕೆ.ಸೋಮಸುಂದರ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 16- ಜಿಲ್ಲೆಯಲ್ಲಿ ಯಾವುದೇ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆ ಇರುವುದಿಲ್ಲ ಹಾಗೂ ರೈತರು ಕೃಷಿ ಪರಿಕರಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿ ಮಾಡಿ, ಕಡ್ಡಾಯವಾಗಿ ರಶೀದಿ ಪಡೆಯಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಸೋಮಸುಂದರ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣ ಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸುವುದು ಕೃಷಿ ಇಲಾಖೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸುಮಾರು 32,789 ಕ್ವಿಂಟಾಲ್ ಬಿತ್ತನೆ ಬೀಜಗಳಾದ ಮೆಕ್ಕೆಜೋಳ, ತೊಗರಿ, ಜೋಳ, ಸಜ್ಜೆ ಹಾಗೂ ಭತ್ತ ದಾಸ್ತಾನಿದ್ದು, ರಸಗೊಬ್ಬರಗಳಾದ ಯೂರಿಯಾ, ಡಿ.ಎ.ಪಿ, ಕಾಂಪ್ಲೆಕ್ಸ್ ಸೇರಿ ಸುಮಾರು 70078 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವೂ ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ದಾಸ್ತಾನಿಕರಿಸಲಾಗಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರÀ ಕೊರತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.