IMG-20240303-WA0034

ಮಕ್ಕಳಿಗೆ ಚಾಕೊಲೇಟ್ ಹಂಚಿ ಪಲ್ಸ್ ಪೋಲಿಯೊ ಲಸಿಕೆ ಹಾಕಿದ ಸಚಿವ ಬಿ.ನಾಗೇಂದ್ರ

ಕರುನಾಡ ಬೆಳಗು ಸುದ್ದಿ

ಬಳ್ಳಾರ,3- ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ‌ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.

ಇದೇ ಸಂದರ್ಭದಲ್ಲಿ ಲಸಿಕಾ ಕೇಂದ್ರಕ್ಕೆ ಬಂದ ಮಕ್ಕಳಿಗೆ ಚಾಕೊಲೇಟ್ ಹಂಚಿದರಲ್ಲದೆ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ಮಗುವಿಗೂ ಚಾಕೊಲೇಟ್ ಹಂಚುವಂತೆ ಆರೋಗ್ಯ ಸಿಬ್ಬಂದಿಗೆ ಸೂಚಿಸಿ ಚಾಕೊಲೇಟ್ ಬಾಕ್ಸ್  ನೀಡಿದರು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಆಡಳಿತ ವೈದ್ಯಾಧಿಕಾರಿ ಡಾ.ಹನುಮಂತಪ್ಪ, ಔಷಧಿ ಅಧಿಕಾರಿ ಬೈಲಪ್ಪ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!