
ವೈದ್ಯರೊಂದಿಗೆ ಮುಕ್ತವಾಗಿ ಸಮಾಲೋಚನೆ ಮಾಡಿ ಚಿಕಿತ್ಸೆ ಪಡೆಯಿರಿ
ಹಂಚಿನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಡಿವೆಪ್ಪ ಯಡಿಯಾಪುರ
ಕರುನಾಡ ಬೆಳಗು ಸುದ್ದಿ
ಕುಕನೂರ 22- ಪ್ರತಿಯೊಬ್ಬರು ವೈದ್ಯರೊಂದಿಗೆ ಮುಕ್ತವಾಗಿ ಸಮಾಲೋಚನೆ ನಡೆಸಿದಾಗ ತಮ್ಮ ದೇಹದಲ್ಲಿರುವ ನ್ಯೂನ್ಯತೆಗೆ ಉತ್ತಮ ಚಿಕಿತ್ಸೆ ದೊರೆಯುವ ಎಲ್ಲಾ ಸಾಧ್ಯತೆಗಳಿದ್ದು ವೈದ್ಯರೊಂದಿಗೆ ಮುಚ್ಚುಮರೆ ಇಲ್ಲದೆ ಮುಕ್ತವಾಗಿ ಮಾತನಾಡಿ ಎಂದು ಯರೆ ಹಂಚಿನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಡಿವೆಪ್ಪ ಯಡಿಯಾಪುರ ಅವರು ಹೇಳಿದರು.
ತಾಲೂಕಿನ ಯರೆಹಂಚಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿನ್ನಾಳ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಹಾಗೂ ಗ್ರಾಮ ಪಂಚಾಯಿತಿ ಯರೆ ಹಂಚಿನಾಳ ಇವರುಗಳ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ವೇಳೆ ಯಾರೆ ಹಂಚಿನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಡಿವೆಪ್ಪ ಯಡಿಯಾಪುರ ಮಾತನಾಡುತ್ತ ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ ಆದ್ದರಿಂದ ಎಲ್ಲರೂ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಯಾವುದೇ ಸಣ್ಣ ಪುಟ್ಟ ಖಾಯಿಲೆಗಳು ಕಂಡು ಬಂದಾಗ ಅಸಡ್ಡೆ ತೋರದೆ ಸೂಕ್ತ ವೈದ್ಯರನ್ನು ಸಂಪರ್ಕಿಸಿ ಸರಿಯಾದ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಹಾಗೂ ವೈದ್ಯರಲ್ಲಿ ಯಾವುದೇ ಮುಚ್ಚು ಮರೆ ಮಾಡದೆ ತಮ್ಮನ್ನು ಕಾಡುತ್ತಿರುವ ಬಾಧೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಕ್ಷಯ, ಅನೀಮಿಯ ರೋಗಭಾದೆ ಹಾಗೂ ಬಾಲ್ಯ ವಿವಾಹ ಪದ್ಧತಿಯಿಂದ ಸಿಲುಕಬಹುದಾದ ಸಂಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ಈ ವೇಳೆಯಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರು, ಆರೋಗ್ಯ ಅಧಿಕಾರಿ ಫಾರೂಕ್ ಹಾಗೂ ಸಿಬ್ಬಂದಿಗಳು ಕೆಎಚ್ ಪಿಟಿ, ಸಿಇಓ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು