ಮೇ 7 ರಂದು ಎಲ್ಲರೂ ಮತಗಟ್ಟೆಗೆ ಬಂದು ಮತದಾನ ಮಾಡಿ : ಸಂತೋಷ ಪಾಟೀಲ್ ಬಿರಾದಾರ್
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 28- ಮೇ 7 ಲೋಕಸಭಾ ಚುನಾವಣೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ತಾ.ಪಂ ಇಓ ಸಂತೋಷ ಪಾಟೀಲ ಬಿರಾದಾರ ಹೇಳಿದರು.
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮತಗಟ್ಟೆ ಆವರಣದಲ್ಲಿ ಚುನಾವಣಾ ಪರ್ವ ದೇಶದ ಗರ್ವ ದ್ವಜವನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಪಾಟೀಲ್ ಬಿರಾದಾರ್ ಚಾಲನೆ ನೀಡಿದರು.
ಈ ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೂ ಮತದಾನ ಮಾಡುವ ಹಕ್ಕನ್ನು ಕೊಟ್ಟಿದೆ. ಆ ಹಕ್ಕನ್ನು ಚಲಾಯಿಸಲು ಎಲ್ಲರೂ ಮತಗಟ್ಟೆ ಬಂದು ಮತದಾನ ಮಾಡಿ ಒಳ್ಳೆ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.
ಇಂದಿನಿಂದ ಎಲ್ಲ ಮತಗಟ್ಟೆಗಳ ಮೇಲೆ ಈ ಧ್ವಜಾರೋಹಣ ಇರಲಿದೆ. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಇಂದು ತಾಲೂಕಿನಲ್ಲಿರುವ ಎಲ್ಲ ಮತಗಟ್ಟೆಗಳ ಮೇಲೆ ದ್ವಜ ಹಾರಾಡಲಿದೆ. ಎಲ್ಲರೂ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ನಂತರ ಹಿರೇವಂಕಲಕುಂಟಾ ಗ್ರಾಮ ಪಂಚಾಯಿತಿ ಪಿಡಿಓ ಗೂಣೆಪ್ಪ ಜಲಿ೯ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡಲು ಸಂವಿಧಾನ ಕೂಟ್ಟ ಹಕ್ಕು ಆದ್ದರಿಂದ ಎಲ್ಲರೂ ಮತದಾನ ಮಾಡಬೇಕು. ಎಂದು ಹೇಳಿದರು.
ಈ ವೇಳೆ ಗ್ರಾಮ ಪಂಚಾಯತಿ ಪಿಡಿಒರಾದ ಗೊಣೆಪ್ಪ ಜಿರ್ಲಿ, ಬಿಲ್ಒ ಸಂಗಮೇಶ . ಶಿವಪ್ಪ ಸೆಕರೇಟರಿ .ಮತ್ತು ಬಸಯ್ಯ ಹಿರೇಮಠ .ಸಂಗಮೇಶ ಬಂಗಾರಿ .ಹಾಗೂ ಕಾರ್ಯದರ್ಶಿಗಳು, ಅಂಗನವಾಡಿ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸ್ವ- ಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು
