
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ವಿದ್ಯಾರ್ಥಿವೇತಕ್ಕಾಗಿ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ 17 ಪಟ್ಟಣದ ಚೆನ್ನಮ್ಮ ವೃತ್ತದ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು,
ನಂತರ ಮನವಿ ಸಲ್ಲಿಸಿದ ಇವರು ದೇಶದಲ್ಲಿಯ ನಮ್ಮ ಕರ್ನಾಟಕವು ಉತ್ತಮವಾದ ಶಿಕ್ಷಣ ವ್ಯವಸ್ಥೆ ಹಾಗೂ ಉತ್ಕೃಷ್ಟ ಮಟ್ಟದ ವಿಶ್ವವಿದ್ಯಾಲಯಗಳಿಂದ ಹೆಸರುವಾಸಿಯಾಗಿ, ಸಾವಿರಾರು ಹೊರರಾಜ್ಯದ ವಿದ್ಯಾರ್ಥಿಗಳು ಕರ್ನಾಟಕವನ್ನು ಶಿಕ್ಷಣಕ್ಕಾಗಿ ಅರಸಿ ಬರುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯಾಗಿದೆ.
ಉನ್ನತ ಶಿಕ್ಷಣದ ಆಸೆಯನ್ನು ಇಟ್ಟುಕೊಂಡ ರಾಜ್ಯದ ಅದೆಷ್ಟೋ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನಮ್ಮ ನೆರವಿಗೆ ಧಾವಿಸುತ್ತದೆ. ನಮಗೆ ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡ ಬೇಕಾದ ಪ್ರಾಮುಖ್ಯತೆಯನ್ನು ನೀಡದೆ ಇರುವುದು, ವಿದ್ಯಾರ್ಥಿವೇತನದಲ್ಲೂ ರಾಜಕೀಯವನ್ನು ಮುಂದುವರಿಸುತ್ತಿರುವುದು ಈ ರಾಜ್ಯದ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ. ಎಸ್.ಎಸ್.ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತ್ತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ.
ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನವನ್ನು ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸವನ್ನು ಮಾಡಿದೆ. ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿತ್ತು. ಈ ವಿದ್ಯಾರ್ಥಿವೇತನವನ್ನು ನಮ್ಮ ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮುಂದುವರಿಸದೆ ಇರು ಅತ್ಯಂತ ಪ್ರಮುಖವಾದ ಕಾರಣ ಅವರಿಗಿರುವ ಆರ್ಥಿಕ ಸಮಸ್ಯೆ ವಿದ್ಯಾರ್ಥಿಗಳಿಗಾಗುವ ಆರ್ಥಿಕ ಸಮಸ್ಯೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಆ ಹಣವನ್ನು ಇನ್ನಿತರ ಕಾರ್ಯಗಳಿಗಾಗಿ ಬಳಸುತ್ತಿರುವ ಕ್ರಮವನ್ನು ಅ.ಭಾ.ವಿ.ಪ ಖಂಡಿಸುತ್ತದೆ. SSP ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸಿದ್ದರು. ವಿದ್ಯಾರ್ಥಿಗಳ ಖಾತೆಗೆ ಹಣ ಜಮಾವಾಗಿರುವುದಿಲ್ಲ. ಹಣ ಜಮಾವಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟುಮಾಡಿದ್ದು ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ, ಶಿಕ್ಷಣದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಂಚಿತರಾಗಿವುದನ್ನು ತಪ್ಪಿಸಬೇಕು ಎಂದು ಈ ಪ್ರತಿಭಟನೆಯ ಮೂಲಕ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ನೂರಾರು ವಿದ್ಯರ್ಥಿಗಳು ಭಾಗವಹಿಸಿದರು. ಗ್ರೇಡ್ 2 ತಹಶೀಲ್ದಾರರಾದ ನಾಗಪ್ಪ ಸಜ್ಜನವರಿಗೆ ಮನವಿಯನ್ನು ಸಲ್ಲಿಸಿದರು,ಈ ಸಂದರ್ಭದಲ್ಲಿ ಶಶಾಂಕ್, ಆಕಾಶ್, ಸತೀಶ್ಕ ರಿಬಸವ, ನಿತೀಶ್,ಅಶೋಕ್, ಉಚ್ಛಯ, ಸವಿತಾ ಸ್ನೇಹ, ನೇತ್ರ, ಯಶೋದಾ, ಪ್ರತಿಭಾ, ಭಾಗ್ಯ, ಭೂಮಿಕಾ ಉಪಸ್ಥಿತರಿದ್ದರು.