
ಭಾರತ ಇಡೀ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ‘ಯೋಗ’: ತಾ. ಪಂ. ಇಓ ನಿಂಗಪ್ಪ ಎಸ್ ಮಸಳಿ
ಕುಷ್ಟಗಿ: ಆರೋಗ್ಯ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಅತ್ಯಂತ ಶ್ರೇಷ್ಠ ಔಷಧವೆಂದರೆ ಯೋಗ. ಈ ಯೋಗವನ್ನು ಇಡೀ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ಎಂಬ ಹೆಮ್ಮೆ ಭಾರತಕ್ಕೆ ಸಲ್ಲುತ್ತದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಿಂಗಪ್ಪ ಎಸ್ ಮಸಳಿ ಹೇಳಿದರು.
ಜೂನ್ ೨೧ ರಂದು ವಿಶ್ವ ಯೋಗ ದಿನಾಚರಣೆ ನಿಮಿತ್ಯವಾಗಿ ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗ ಮನಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ ಯೋಗವಾಗಿದೆ. ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿ ವರ್ಷ ಯೋಗದ ದಿನಾಚರಣೆಯ ಯೋಗ ,ಧ್ಯಾನ ಸಭೆಗಳು, ಚರ್ಚೆಗಳು ಸಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಾಸಿಸೋದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳು ಯೋಗ ದಿನವನ್ನು ಆಚರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗಕ್ಕೆ ಮೊರೆ ಹೋದಲ್ಲಿ ರೋಗದಿಂದ ಮುಕ್ತವಾಗಬಹುದಾಗಿದೆ ಎಂದರು.
ನಂತರ ತಾ ಪಂ ಸಹಾಯಕ ನಿರ್ದೇಶಕರಾದ ನಿಂಗನಗೌಡ ವಿ ಹೆಚ್ ರವರು ಮಾತನಾಡಿ ಯೋಗವು ಮನಸ್ಸು ದೇಹ ಮತ್ತು ಆತ್ಮ ಸೇರಿದ ಎಲ್ಲಾ ಮೂರು ಅಂಶಗಳನ್ನು ಶುದ್ಧೀಕರಿಸಲು ನೆರವಾಗುತ್ತದೆ. ಜೀವನ ಶೈಲಿ ಹಾಗೂ ಪ್ರಜ್ಞೆ ರಕ್ಷಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದರು.
ಇದೇ ವೇಳೆ ಯೋಗ ಡೇ ನಿಮಿತ್ಯ ಯೋಗಾಸನಗಳನ್ನು ಮಾಡಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾ ಪಂ ಸಿಬ್ಬಂದಿಗಳಾದ ಬಸವರಾಜ್ ಕೆ, ಚಂದ್ರಶೇಖರ್ ಜಿ ಹಿರೇಮಠ್, ಬಸವರಾಜ್ ಟಿ , ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಶರಣಮ್ಮ ಕೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು , ಸರ್ವ ಸದಸ್ಯರು , ಶಿಕ್ಷಣ ಇಲಾಖೆ ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎಸ್,ಹೆಚ್ಚ,ಜಿ ಸದಸ್ಯರು ,ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.