
ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 6- ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣದಿAದ 2024-25ನೇ ಸಾಲಿನ ಹತ್ತು ತಿಂಗಳ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಂಗ ತರಬೇತಿ ಕೋರ್ಸ್ಗೆ ಸೇರಲು ಇಚ್ಚಿಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. 18 ರಿಂದ 28 ವಯಸ್ಸಿನ ವಯೋಮಿತಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿAದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿಗಳು ಜೂನ್ 05 ರಿಂದ ರಂಗಾಯಣದ ವೆಬ್‌ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಮತ್ತು ರಂಗ ಕೈಪಿಡಿ ಸೇರಿ (ಸಾಮಾನ್ಯ ವರ್ಗಕ್ಕೆ 230 ರೂ., ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 180 ರೂ.) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 20ರ ಸಂಜೆ 05.30 ಗಂಟೆಯೊಳಗೆ ತಲುಪುವಂತೆ ಅಂಚೆಯ ಮೂಲಕ ಅಥವಾ ಖುದ್ದಾಗಿ ರಂಗಾಯಣದ ಕಚೇರಿಗೆ ತಲುಪಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪತ್ರದ ಮೂಲಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುತ್ತದೆ. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿAದ ಮಾಡಲಾಗುತ್ತದೆ. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2512639, ಮೊ.ಸಂ: 9148827720 ಗೆ ಸಂಪರ್ಕಿಸುವAತೆ ಮೈಸೂರು ರಂಗಾಯಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.