
ರಾಷ್ಟ್ರೀಯ ಪಲ್ಸ್ ಪೋಲಿಯೋ ದಡರಾ ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಾ.ಬಿ.ಈರಣ್ಣ
ಕರುನಾಡಬೆಳಗು ಸುದ್ದಿ
ಸಿರುಗುಪ್ಪ,8- ಮಾರ್ಚ್ 3ರಿಂದ 6ರರವರೆಗೆ ಸಿರುಗುಪ್ಪ ತಾಲೂಕಿನಾದ್ಯಂತ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ದಡರಾ ಮತ್ತು ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮಕ್ಕೆ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ ಬಿ ಈರಣ್ಣ ಅವರು ಹೇಳಿದರು.
ತಾಲೂಕ ಕಚೇರಿ ತಹಸಿಲ್ದಾರ್ ಅವರ ಸಭಾಭವನದಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾರ್ವಜನಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಾಲೂಕ ಆಡಳಿತ ತಾಲೂಕ ಪಂಚಾಯತ್ ರಾಜ್ ಇಲಾಖೆ ನಗರಸಭೆ ಪಟ್ಟಣ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ 186 ಬೂತ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಮುಖ್ಯವಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಇತರೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು.
ತಾಲೂಕಿನ 27 ಗ್ರಾಮ ಪಂಚಾಯತ್ ಸಿರುಗುಪ್ಪ ನಗರಸಭೆ ತೆಕ್ಕಲಕೋಟೆ ಪಟ್ಟಣ ಪಂಚಾಯತ್ ನಲ್ಲಿ ಪಲ್ಸ್ ಪೋಲಿಯೋ ಹನಿ ಹಾಕಲು ಬೂತ್ ಗಳನ್ನು ತೆರೆಯಲಾಗುವುದು ಪಲ್ಸ್ ಪೋಲಿಯೋ ಹನಿ ಹಾಕುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ಕಸ ವಿಲೇವಾರಿ ಮಾಡುವ ವಾಹನಗಳ ಮೂಲಕ ಹೆಚ್ಚಿನ ಪ್ರಚಾರ ಮಾಡಬೇಕು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲಾಗುವುದು ಯಾವುದೇ ಮಗು ಪಲ್ಸ್ ಪೋಲಿಯೋ ಹನಿಯಿಂದ ವಂಚಿತರಾಗಬಾರದು ಸಂಬಂಧಿಸಿದ ಅಧಿಕಾರಿಗಳು ಮುತವರ್ಜಿ ವಹಿಸಿ ಮಕ್ಕಳನ್ನು ಬೂತ್ ಗಳಿಗೆ ಕರೆತಂದು ಪಲ್ಸ್ ಪೋಲಿಯೋ ಹನಿ ಹಾಕಿಸಬೇಕು ಎಂದು ಅವರು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಉಪ ತಹಸಿಲ್ದಾರ್ ರಾಘವೇಂದ್ರ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಾಷ್ಟ್ರೀಯ ಸಾಕ್ಷರತಾ ಸದಸ್ಯ ಸಮಾಜ ಕಾರ್ಯಕರ್ತ ಅಬ್ದುಲ್ ನಬಿ ವಿವಿಧ ಇಲಾಖೆಗಳ ಅಧಿಕಾರಿಗಳು ವೈದ್ಯರು ಇದ್ದರು.