
ವಾಂತಿ ಭೇದಿ : ನಲ್ಲಾಪುರ ಗ್ರಾಮಕ್ಕೆ ಸಿಇಓ ಭೇಟಿ ಪರಿಶೀಲನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ,24- ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲಾಪುರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು.ಬಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಕರಣದ ಬಗ್ಗೆ ಸಿಇಓ ಅವರು ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ವಾಂತಿ ಭೇದಿ ಪ್ರಕರಣಗಳ ಬಗ್ಗೆ ತೀವ್ರ ನಿಗಾವಹಿಸಲು ಸೂಚಿಸಿದರು.
ತಾತ್ಕಾಲಿಕವಾಗಿ ಆಯುಷ್ ಇಲಾಖೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿರುವುದನ್ನು ಸಿಇಓ ಅವರು ಒದೆ ವೇಳೆ ಪರಿಶೀಲಿಸಿದರು. ಅಲ್ಲಿನ ರೋಗಿಗಳೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕಿನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಉಮೇಶ್. ತಾಲೂಕು ಆರೋಗ್ಯಾಧಿಕಾರಿ ಭಾಸ್ಕರ್ ಮತ್ತಿತರರು ಇದ್ದರು.