12gvt2

ಶಿಕ್ಷಣ ಪಡೆದಾಗ ಮಾತ್ರ

ಹೆಣ್ಣು ಬ್ರೂಣ ಹತ್ಯೆ ತಡೆಯಲು ಸಾಧ್ಯ

ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವೇಂದ್ರ ಪಂಡಿತ್ 

ಕರುನಾಡ ಬೆಳಗು ಸುದ್ದಿ

ಗಂಗಾವತಿ,ಡಿ೧೨- ಹೆಣ್ಣು ಮಕ್ಕಳ ಶಿಕ್ಷಣ ಪಡೆದಾಗ ಮಾತ್ರ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಹೇಳಿದರು.
ಜಿಲ್ಲಾಡಳಿತ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಪ ವಿಭಾಗ ಆಸ್ಪತ್ರೆ, ಗಂಗಾವತಿ, ಇವರ ಸಂಯುಕ್ತಾಶ್ರಯದಲ್ಲಿ ಉಪ ವಿಭಾಗ ಆಸ್ಪತ್ರೆ, ಗಂಗಾವತಿಯಲ್ಲಿ ಆಯೋಜಿಸಿದ್ದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇದ) ಅಧಿನಿಯಮ ೧೯೯೪ರ ಕುರಿತು ಕ್ಷೇತ್ರಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟçದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದಕ್ಕೆ ಹಲವಾರು ಕಾರಣಗಳಿವೆ. ಗಂಡು ಮಗು ಬೇಕೆಂಬ ಬಯಕೆ, ಗಂಡು ಮಗು ವಂಶೋದ್ಧಾರಕ, ಪುರುಷ ಪ್ರಧಾನ ಕುಟುಂಬ ಈ ರೀತಿಯ ಮನೋಭಾವನೆಯಿಂದ ೫-೬ ಹೆಣ್ಣು ಮಕ್ಕಳನ್ನು ಪಡೆದು, ಅವರಿಗೆ ಸರಿಯಾಗಿ ಊಟ, ಶಿಕ್ಷಣ, ವಸತಿ ಹಾಗೂ ಆರ್ಥಿಕ ಸೌಲಭ್ಯ ನೀಡದೆ ಎಷ್ಟೋ ತಾಯಂದಿರು ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಅಜ್ಞಾನ, ಮೂಢನಂಬಿಕೆ, ಅನಕ್ಷರತೆ, ಬಾಲ್ಯವಿವಾಹ, ಜನನಗಳ ನಡುವೆ ಅಂತರವಿಲ್ಲದಿರುವುದು, ಗಂಡು ಮಗು ಬೇಕೆಂಬ ಹಂಬಲ, ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದ ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡು ಇತರರಿಗೂ ತಿಳಿಸಬೇಕು.
. ಬಾಲ್ಯ ವಿವಾಹ ನಿಷೇದ ಕುರಿತು ಸರ್ಕಾರ ನಿಗದಿ ಪಡಿಸಿದ ವಯಸ್ಸಿಗೆ ಮದುವೆ ಮಾಡಬೇಕು, ತಮ್ಮ ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿಸಲು ಅವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು.
ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಹೆಣ್ಣು ಮಕ್ಕಳನ್ನು ರಕ್ಷಿಸಬೇಕು. ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಇರಬೇಕು. ಬಾಲ್ಯವಿವಾಹ ಮಾಡಿದರೆ ಕಾನೂನಿನ ಪ್ರಕಾರ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಆದ್ದರಿಂದ ಯಾರು ಬಾಲ್ಯವಿವಾಹ ಮಾಡಬಾರದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಗಂಗಾವತಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಮೇಶ ಗಾಣಿಗೇರ ಅವರು ಮಾತನಾಡಿ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದಲ್ಲಿ, ಮೊದಲನೇ ಅಪರಾಧಕ್ಕೆ ೩ ವರ್ಷ ಜೈಲು ಶಿಕ್ಷೆ ಮತ್ತು ರೂ.೧೦,೦೦೦/-ಗಳ ದಂಡ ಹಾಗೂ ಎರಡನೇ ಅಪರಾಧಕ್ಕೆ ೦೫ ವರ್ಷ ಜೈಲು ಶಿಕ್ಷೆ ಮತ್ತು ರೂ.೫೦,೦೦೦/-ಗಳ ದಂಡ ವಿಧಿಸಲಾಗುವುದು ಹಾಗೂ ಮೊದಲನೇ ಅಪರಾಧಕ್ಕೆ ಐದು ವರ್ಷಗಳವರೆಗೆ ವೈದ್ಯಕೀಯ ವೃತ್ತಿ ಮಾಡದಂತೆ ಶಿಕ್ಷೆ ಹಾಗೂ ಎರಡನೇ ಅಪರಾಧಕ್ಕೆ ಶಾಶ್ವತವಾಗಿ ವೈದ್ಯಕೀಯ ಮಂಡಳಿಯಿAದ ಅವರ ಹೆಸರನ್ನು ತೆಗೆದುಹಾಕಲಾಗುವುದು.
ಸಾರ್ವಜನಿಕರು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದಲ್ಲಿ ಮೊದಲನೇ ಅಪರಾಧಕ್ಕೆ ೩ ವರ್ಷ ಜೈಲು ಮತ್ತು ರೂ.೫೦,೦೦೦/-ಗಳ ದಂಡ ವಿಧಿಸಲಾಗುವುದು. ಎರಡನೇ ಅಪರಾಧಕ್ಕೆ ೦೫ ವರ್ಷ ಜೈಲು ರೂ.೧,೦೦,೦೦೦/- ಗಳ ವರೆಗೆ ದಂಡ ವಿಧಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಮಾತನಾಡಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಕ್ಷಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಭ್ರೂಣಲಿಂಗ ಪತ್ತೆ ಮಾಡುವುದು ಕಂಡು ಬಂದರೆ ಅದನ್ನು ತಾಲೂಕಾ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿ, ಭ್ರೂಣಲಿಂಗ ಪತ್ತೆ ಆಗುವುದನ್ನು ತಡೆಗಟ್ಟಬೇಕು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ರವೀಂದ್ರನಾಥ್ ಎಂ.ಹೆಚ್, ಮಾತನಾಡಿದರು.
ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ಆಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರಪತ್ರ ಹಾಗೂ ಭಿತ್ತಿಪತ್ರ ವಿತರಣೆ ಮಾಡಲಾಯಿತು.

ಈಸಂದರ್ಭದಲ್ಲಿ ಉಪ ವಿಭಾಗ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ|| ಈಶ್ವರ ಸವಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ|| ಗೌರಿಶಂಕರ ಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ, ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!