
ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳ ಉದ್ಘಾಟನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ- ಗ್ರಾಮೀಣ ಪ್ರದೇಶದ ಸ್ವ ಸಹಾಯ ಗುಂಪಿನ ಮಹಿಳೆಯರು ಮನೆಯಲ್ಲಿ ಸ್ವಯಂ ಉದ್ಯೋಗ ಮಾಡುತ್ತಿರುವದು ಸಂತೋಷದ ವಿಷಯ ಮಹಿಳೆಯರು ಸಿದ್ಧಪಡಿಸಿದ ಉತ್ಪನ್ನಗಳನ್ನು ಸಂತೆಯಲ್ಲಿ ಮಾರಾಟ ಮಾಡಲು ಉತ್ತಮ ವೆಂದು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಅಭಿಪ್ರಾಯಪಟ್ಟರು . ಸಿರುಗುಪ್ಪ ತಾಲೂಕು ಹಳೆಕೋಟೆ ಗ್ರಾಮದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟ ಸಹಭಾಗಿತ್ವದಲ್ಲಿ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳ ಉದ್ಘಾಟನೆಯಲ್ಲಿ ಮಾತನಾಡಿದರು.
ಸಂಜೀವಿನಿ ಸ್ವಸಹಾಯ ಗುಂಪುಗಳಲ್ಲಿ ತೊಡಗಿಸಿಕೊಂಡಿರುವ ಗ್ರಾಮೀಣ ಭಾಗದ ಮಹಿಳೆಯರು ಸಿದ್ಧ ಪಡಿ ಸಿದ ಉತ್ಪನ್ನಗಳನ್ನು ಮಾರಾಟ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು ಹಳೆಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ವಿರೇಶ ಕೃಷಿ ಉತ್ಪನ್ನ ಮಾರುಕಟ್ಟೆ ಕಮಿಟಿ ಮಾಜಿ ಅಧ್ಯಕ್ಷ ವೈ ರಾಮಸ್ವಾಮಿ ಸಾಹುಕಾರ್ ನಗರಸಭಾ ಸದಸ್ಯ ಹೆಚ್ ಗಣೇಶ ಬಿ ವೆಂಕಟೇಶ ಜನಾಭಿಪ್ರಾಯ ಮುಖಂಡ ಅಬ್ದುಲ್ ನಬಿ ಹಳೆಕೋಟಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ಕೆ ಮಹಾನ್ ತೇಶಾ ಸ್ವಾಮಿ ಬಿಕೆ ರಘು ವಕೀಲರಾದ ವೆಂಕಟೇಶ ನಾಯಕ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರು ಇದ್ದರು.