IMG-20240325-WA0021

 

ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ದೂರು

ಕರುನಾಡ ಬೆಳಗು ಸುದ್ದಿ
ಬೆಂಗಳೂರು, 25 -ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಸರಕಾರದ ಸಚಿವ ಶಿವರಾಜ್ ತಂಗಡಗಿ ಅವರ ವಿರುದ್ಧ ಬಿಜೆಪಿ ನಿಯೋಗವು ಇಂದು ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತಿತರ ಪ್ರಮುಖರು ಈ ದೂರು ನೀಡಿದರು.
ಸಚಿವ ಶಿವರಾಜ್ ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ, ಇವರಿಗೆ ಚುನಾವಣೆಯಲ್ಲಿ ಮತ ಕೇಳಲು ನಾಚಿಕೆಯಾಗಬೇಕು. ‘ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ’ ಎಂದು ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ.

ಈ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಎತ್ತಿಕಟ್ಟಿ, ದ್ವೇಷ ಭಾವನೆ ಮೂಡುವಂತೆ ಮಾಡಿ ಮತದಾರರ ಮೇಲೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ ಎಂದು ಮನವಿ ಗಮನ ಸೆಳೆದಿದೆ.ಇಂಥ ಹೇಳಿಕೆಯಿಂದ ಮತದಾರರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸಂಬಂಧ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!