e2243237-8f04-4598-b2d5-3a34813018b1

ಸರ್ಕಾರದ ಹಿರಿಯ ಕಾರ್ಯದರ್ಶಿಗಳಿಗೆ ಶುಭಾಶಯ ಕೋರಿದ ಸಿಎಂ

2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ :

ಮುಖ್ಯಮಂತ್ರಿ ಸಿದ್ದರಾಮಯ್ಯ

ಕರುನಾಡ ಬೆಳಗು ಸುದ್ದಿ

ಬೆಂಗಳೂರು, ಜನವರಿ 01: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.

ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.

ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60 ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ.

ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು. ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ ಎಂದರು. ರಾಜ್ಯ ದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತ ರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಅವರು ಬರೆದಿರುವ ‘ ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!