oplus_133120

oplus_133120

ಮತ ಎಣಿಕೆ ಪ್ರಕ್ರಿಯೆಗೆ ತೊಂದರೆಯಾಗದAತೆ ಶಿಸ್ತು ಪಾಲಿಸಿ : ಡಿಸಿ ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 1- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಕಾರ್ಯವು ಜೂನ್ 04 ರಂದು ನಡೆಯಲಿದ್ದು, ಅಂದು ಮತ ಎಣಿಕೆ ಕೇಂದ್ರದಲ್ಲಿ ಹಾಜರಿರುವ ಚುನಾವಣಾ ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಮತ ಎಣಿಕೆ ಪ್ರಕ್ರಿಯೆ ಹಾಗೂ ಮತ ಎಣಿಕೆ ಸಿಬ್ಬಂದಿಗೆ ತೊಂದರೆಯಾಗದoತೆ ಕಡ್ಡಾಯವಾಗಿ ಶಿಸ್ತು ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.

ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 08- ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹಾಗೂ ಚುನಾವಣಾ ಏಜೆಂಟರವರಿಗೆ ಮತ ಎಣಿಕಾ ಕಾರ್ಯದ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 04 ರ ಮಂಗಳವಾರದAದು ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಬೆಳಿಗ್ಗೆ 07.30 ಗಂಟೆಗೆ ಭದ್ರತಾ ಕೊಠಡಿಗಳನ್ನು ತೆರೆಯಲಾಗುತ್ತದೆ. 08 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‌ಗಳನ್ನು ನಿಗದಿಪಡಿಸಲಾಗಿದೆ. ಆಯಾ ಕ್ಷೇತ್ರದ ಮತದಾರರ ಸಂಖ್ಯೆಗೆ ಅನುಗುಣವಾಗಿ ಮತ ಎಣಿಕೆ ಸುತ್ತುಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ತಮಗೆ ಅವಶ್ಯಕ ಮತ್ತು ಅನಿವಾರ್ಯ ಎನಿಸುವ ಎಣಿಕೆ ಏಜೆಂಟರನ್ನು ನೇಮಕ ಮಾಡಬಹುದು. ಗ್ರಾಮ ಪಂಚಾಯತಿಯ ಅಧ್ಯಕ್ಷರು/ಉಪಾಧ್ಯಕ್ಷರು, ಸದಸ್ಯರು ಹಾಗೂ ನಗರಸಭೆ ಸದಸ್ಯರು ಕೌಂಟಿAಗ್ ಏಜೆಂಟರಾಗಬಹುದು. ಕೌಂಟಿAಗ್ ಏಜೆಂಟರು ಇದೇ ಕ್ಷೇತ್ರದ ಸಾಮಾನ್ಯ ರಹವಾಸಿಯಾಗಿರಬೇಕು. ಪ್ರತಿ ಸುತ್ತಿನ ಕೊನೆಗೆ ಪ್ರತಿ ಅಭ್ಯರ್ಥಿ ಪಡೆದ ಮತಗಳ ಮಾಹಿತಿಯನ್ನು ನೀಡಲಾಗುತ್ತದೆ. ಆದ್ದರಿಂದ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರುವ ಚುನಾವಣಾ ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಮತ ಎಣಿಕೆ ಪ್ರಕ್ರಿಯೆ ಹಾಗೂ ಮತ ಎಣಿಕೆ ಸಿಬ್ಬಂದಿಗೆ ತೊಂದರೆಯಾಗದAತೆ ಕಡ್ಡಾಯವಾಗಿ ಶಿಸ್ತು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪಕ್ಷಗಳ, ಅಭ್ಯರ್ಥಿಗಳ ಪ್ರತಿನಿಧಿಗಳಿಗೆ ತಿಳಿಸಿದರು.

ಕೌಂಟಿAಗ್ ಏಜೆಂಟರ ನೇಮಕಾತಿಗಾಗಿ ನಮೂನೆ 18 ರಲ್ಲಿ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು. ಪ್ರತಿ ಎಣಿಕೆ ಏಜೆಂಟರಿಗೆ ಸಹಾಯಕ ಚುನಾವಣಾಧಿಕಾರಿಗಳಿಂದ ಭಾವಚಿತ್ರವುಳ್ಳ ಅಧಿಕೃತ ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಗುರುತಿನ ಚೀಟಿ/ಪಾಸ್ ಹೊಂದಿರದ ಯಾವುದೇ ವ್ಯಕ್ತಿಗೆ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಮಾಡಲು ಅವಕಾಶವಿಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ಪ್ರತ್ಯೇಕ ಬಣ್ಣದ ಪಾಸ್ ಅನ್ನು ನೀಡಲಾಗುತ್ತದೆ. ಏಜೆಟಂರು ತಮಗೆ ನಿಗದಿಪಡಿಸಿದ ಟೇಬಲ್ ಮತ್ತು ಕ್ಷೇತ್ರಕ್ಕೆ ನಿಗದಿಪಡಿಸಿರುವ ಕೌಂಟಿoಗ್ ಕೊಠಡಿಯನ್ನು ಬಿಟ್ಟು ಬೇರೆ ಕಡೆಗೆ ಹೋಗುವಂತಿಲ್ಲ. ಶಿಸ್ತನ್ನು ಪಾಲಿಸದೇ ಇರುವ ಏಜೆಂಟರನ್ನು ಯಾವುದೇ ಸಂದರ್ಭದಲ್ಲಿ ಚುನಾವಣಾಧಿಕಾರಿ ಯಾವುದೇ ಪೂರ್ವ ಮುನ್ಸೂಚನೆ ನೀಡದೆ ಹೊರಗೆ ಹಾಕುವ ಅಧಿಕಾರ ಹೊಂದಿರುತ್ತಾರೆ. ಮತ ಎಣಿಕೆ ಮುಖ್ಯ ಪ್ರವೇಶದ್ವಾರದ ಬಳಿ ಮತ್ತು ಮತ ಎಣಿಕೆ ಕೊಠಡಿ ಬಳಿ ಎರಡು ಬಾರಿ ತಪಾಸಣೆ ಮಾಡಲಾಗುವುದು. 58-ಸಿಂಧನೂರು, 59-ಮಸ್ಕಿ, 60-ಕುಷ್ಟಗಿ, 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿಗೆ ನೆಲ ಮಹಡಿಯಲ್ಲಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಹಾಗೂ 92-ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವನ್ನು ಕಾಲೇಜಿನ ಮೊದಲನೇ ಮಹಡಿಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯ ವೇಳೆ ನಿಗದಿಪಡಿಸಿದ ಕ್ರಮದಂತೆ ರಾಷ್ಟಿಯ ಪಕ್ಷದ ಅಭ್ಯರ್ಥಿಗಳ ಏಜೆಂಟರು, ನೋಂದಾಯಿತ ಆದರೆ ಮಾನ್ಯತೆ ಪಡೆಯದ ಪಕ್ಷದ ಅಭ್ಯರ್ಥಿಯ ಏಜೆಂಟರು ಹಾಗೂ ಪಕ್ಷೇತರ ಅಭ್ಯರ್ಥಿಗಳ ಏಜೆಂಟರು ಕುಳಿತುಕೊಳ್ಳಬೇಕು. ಪ್ರತಿಯೊಬ್ಬ ಎಣಿಕೆ ಏಜೆಂಟ್ ಮತ ಎಣಿಕೆ ಪ್ರಕ್ರಿಯೆ ಮುಗಿಯುವವರೆಗೂ ಸಂಪೂರ್ಣ ಶಿಸ್ತು ಮತ್ತು ತಾಳ್ಮೆಯಿಂದ ವರ್ತಿಸಬೇಕು. ಎಣಿಕೆ ಪ್ರಕ್ರಿಯೆ ಪ್ರಾರಂಭವಾಗುವುದಕ್ಕಿoತ ಮುಂಚೆ ಪ್ರಜಾ ಪ್ರಾತಿನಿಧ್ಯ ಕಾಯಿದೆ ಸೆಕ್ಷನ್ 128 ರ ಪ್ರಕಾರ ಮತದಾನದ ರಹಸ್ಯವನ್ನು ಕಾಯ್ದುಕೊಳ್ಳುವ ಪ್ರತಿಜ್ಞೆ ಸ್ವೀಕರಿಸಬೇಕು. ಏಜೆಂಟರು ಕೇವಲ ಪೆನ್ನು ಮತ್ತು ಹಾಳೆಯನ್ನು ತೆಗೆದುಕೊಂಡು ಬರಲು ಅವಕಾಶವಿದೆ. ಬರೆದುಕೊಳ್ಳಲು ನೋಟ್‌ಪ್ಯಾಡ್ ಮತ್ತು ಮತದಾನದ ದಿನದಂದು ಪ್ರಿಸೈಡಿಂಗ್ ಅಧಿಕಾರಿ ನೀಡಿರುವ 17-ಸಿ ಮತಪತ್ರಗಳ ಲೆಕ್ಕದ ಪ್ರತಿಯನ್ನು ತೆಗೆದುಕೊಂಡು ಬರಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಅಭ್ಯರ್ಥಿಗಳಿಗೆ ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಟೇಬಲ್‌ಗಳ ಸುತ್ತಲೂ ಹಾಕಿರುವ ವೈರ್ ಮೆಷ್‌ನ್ನು ದಾಟಿ ಹೋಗಲು ಅವಕಾಶವಿಲ್ಲ. ಯಾವುದೇ ಸಂದರ್ಭದಲ್ಲಿಯೂ ಮತಯಂತ್ರಗಳನ್ನು ಭೌತಿಕವಾಗಿ ಮುಟ್ಟಲು ಏಜೆಟರುಗಳಿಗೆ ಅವಕಾಶವಿಲ್ಲ. ಮೊಬೈಲ್ ಫೋನ್‌ಗಳಿಗೆ ಅವಕಾಶವಿಲ್ಲ. ಮೊಬೈಲ್ ಫೋನ್‌ಗಳ ಸಂಗ್ರಹಣಾ ಕೌಂಟರ್ ಇರುವುದಿಲ್ಲವಾದ್ದರಿಂದ ಫೋನ್‌ಗಳನ್ನು ತೆಗೆದುಕೊಂಡು ಬರುವಂತಿಲ್ಲ. ನೀರಿನ ಬಾಟಲಿ, ಕತ್ತರಿ/ಚಾಕು ಅಥವಾ ಇನ್ನಿತರೆ ಹರಿತವಾದ ವಸ್ತುಗಳು, ಲೈಟರ್, ಬೆಂಕಿ ಪೊಟ್ಟಣಗಳಿಗೆ ಅವಕಾಶವಿಲ್ಲವಾದ್ದರಿಂದ ಈ ವಸ್ತುಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರುವಂತಿಲ್ಲ. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಪಾರ್ಕಿಂಗ್ ಸೇರಿದಂತೆ ಚುನಾವಣಾ ಆಯೋಗ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಚುನಾವಣಾ ತಹಶೀಲ್ದಾರ ರವಿಕುಮಾರ್ ವಸ್ತ್ರದ್, ಜಿಲ್ಲಾ ಪೊಲೀಸ್ ಡಿಎಸ್‌ಬಿ ಘಟಕದ ಪಿಐ ನಾಗರಾಜ ಆರ್., ಸೇರಿದಂತೆ ಚುನಾವಣಾ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಏಜೆಂಟರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!