WhatsApp Image 2024-03-02 at 3.49.58 PM

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಆರ್ಥಿಕತೆಯ ಬೆನ್ನೆಲುಬು : ಜಿಪಂ ಸಿಇಓ ರಾಹುಲ್ ಸಂಕನೂರ

ಕರುನಾಡ ಬೆಳಗು ಸುದ್ದಿ

ಬಳ್ಳಾರ,2- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‍ಎಂಇ) ವಲಯವು ಆರ್ಥಿಕತೆಯ ಬೆನ್ನೆಲುಬಾಗಿದ್ದು, ಸಣ್ಣ ಕೈಗಾರಿಕೆಗಳು ಬೆಳವಣೆಗೆಯಾದರೆ ದೊಡ್ಡ ಕೈಗಾರಿಕೆಗಳು ಬೆಳವಣಿಗೆಗೆ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಅವರು ಅಭಿಪ್ರಾಯ ಪಟ್ಟರು.

ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಮಾನಗಳಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚೆಚ್ಚು ಪ್ರೋತ್ಸಾಹಿಸಲಾಗುತ್ತಿದೆ. ಹೀಗಾಗಿ ಇಂತಹ ಕಾರ್ಯಗಾರಗಳಲ್ಲಿ ಭಾಗವಹಿಸಿದರೆ ಎಂಎಸ್‍ಎಂಇ ಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಮಹಾರುದ್ರ ಗೌಡ ಅವರು ಮಾತನಾಡಿ, ಎಂಎಸ್‍ಎಂಇ ವಲಯಕ್ಕೆ ಸಂಬಂಧಿಸಿದಂತೆ ಇಂತಹ ಜಾಗೃತಿ ಸಭೆಗಳು ಸಂಕಷ್ಟದಲ್ಲಿ ಇರುವ ಅನೇಕ ಕೈಗಾರಿಕೆಗಳ ಪಾಲಿಗೆ ಸಂಜೀವಿನಿ ಆಗಲಿದೆ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಸಂಕಷ್ಟದಲ್ಲಿರುವ ಬಂಡವಾಳ ಹೂಡಿಕೆದಾರರು ಸರ್ಕಾರದಿಂದ ಪಡೆಯಬಹುದಾದ ಆರ್ಥಿಕ ನೆರವು, ತೆರಿಗೆ ವಿನಾಯಿತಿ, ಪಡೆದ ಸಾಲಕ್ಕೆ ಸಬ್ಸಿಡಿ, ರಫ್ತು ಘಟಕಗಳು ಪಡೆಯಬಹುದಾದ ನಾನಾ ರೀತಿಯ ರಿಯಾಯಿತಿಗಳ ಮಾಹಿತಿ ಆರ್ಥಿಕ ಸದೃಢತೆಗೆ ನೆರವಾಗಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಕಾಸಿಯಾ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಅವರು ಮಾತನಾಡಿ, ಹಣಕಾಸಿನ ನೆರವು ಎಲ್ಲಾ ಸಣ್ಣ ಪ್ರಮಾಣದ ವ್ಯವಹಾರಗಳು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆ ಕ್ರೆಡಿಟ್ ಆಗಿದೆ ಎಂದು ತಿಳಿಸಿದರು.

ಬೆಂಗಳೂರಿನ ವಿಟಿಪಿಸಿ ಉಪ ನಿರ್ದೇಶಕ ಮನ್ಸೂರ್ ಅವರು, ಇ-ಕಾಮರ್ಸ್ ರಪ್ತು, ಎಂಎಸ್‍ಎಂಇಗಳಿಗೆ ಹೇಗೆ ರಪ್ತು ಮಾಡುವುದು ಮತ್ತು ಇದರ ಅನುಕೂಲಗಳು ಹಾಗೂ ಅನಾನುಕಲಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿ ಕೆ.ಸಿ.ಸುರೇಶ್ ಬಾಬು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ ಸೇರಿದಂತೆ ಜಿಲ್ಲಾ ಕೈಗಾರಿಕಾ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಉಪ ಸಮಿತಿಗಳ ಚೇರ್‍ಮನ್‍ಗಳು, ವಿವಿಧ ಕೈಗಾರಿಕೆ ವಲಯಗಳ ಅಧಿಕಾರಿಗಳು, ಪದಾಧಿಕಾರಿಗಳು ಹಾಗೂ ಇತರೆ ಸಂಘ-ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!