
ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಕಲಿಕೆಗೆ ಒತ್ತು ನೀಡಿ : ದೊಡ್ಡಬಸಪ್ಪ ನೀರಲಕೇರಿ
ಮಕ್ಕಳಿಗೆ ಶೈಕ್ಷಣಿಕ ಹಂತದ ಮೊದಲ ಘಟ್ಟವಾದ ಪೂರ್ವ ಪ್ರಾಥಮಿಕ ಶಿಕ್ಷಣವು ಮಕ್ಕಳನ್ನ ಕಲಿಕೆಗೆ ಸಿದ್ಧಗೊಳಿಸುವ ಬಹುಮುಖ್ಯವಾದ ಹಂತವಾಗಿದ್ದು ಮಕ್ಕಳಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಕಲಿಕೆಗೆ ಶಿಕ್ಷಕರು ಒತ್ತು ನೀಡಿ ಕೌಶಲ್ಯಗಳನ್ನು ಕಲಿಸಬೇಕು ಎಂದು ದೊಡ್ಡಬಸಪ್ಪ ನೀರಲಕೇರಿ ಹೇಳಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕರಿಗೆ ಹಮ್ಮಿಕೊಂಡ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಅಡಿಪಾಯಕ್ಕೆ ಮಕ್ಕಳು ಹೊಂದಿಕೊಳ್ಳಲು ಪ್ರಾಥಮಿಕ ಹಂತ ಮುಖ್ಯವಾಗಿರುತ್ತದೆ. ಮಕ್ಕಳಲ್ಲಿ ಅನೇಕ ಪ್ರತಿಭೆಗಳು, ಕೌಶಲ್ಯಗಳನ್ನು ಕಲಿಸಲು ಇದು ತುಂಬಾ ಒಳ್ಳೆಯ ಸಮಯವಾಗಿದ್ದು ಮಕ್ಕಳಿಗೆ ಶಿಕ್ಷಣದ ಒಲವು ಮೂಡಿಸುವಲ್ಲಿ ಪ್ರೋತ್ಸಾಹಿಸಬೇಕೆಂದು ಶಿಕ್ಷಕರಿಗೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಅವರು ಮಾತನಾಡಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೂ ಪೂರ್ವ ಪ್ರಾಥಮಿಕ ಶಿಕ್ಷಣ ಲಭ್ಯವಾಗಬೇಕು ಎನ್ನುವ ಸದುದ್ದೇಶದಿಂದ ಕುಷ್ಟಗಿ ತಾಲೂಕಿನಲ್ಲಿ 36 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗವನ್ನ ತೆರೆಯುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಅತ್ಯಂತ ಸಂತಸದ ಕ್ಷಣವಾಗಿದೆ , ಗ್ರಾಮೀಣ ಭಾಗದಲ್ಲಿ ಎಲ್ಕೆಜಿ ಯುಕೆಜಿ ತರಗತಿಗಳು ಆರಂಭಗೊಳ್ಳುತ್ತಿರುವುದು ಗ್ರಾಮೀಣ ಭಾಗದ ಜನರಲ್ಲಿ ಶಿಕ್ಷಣದ ಬಗ್ಗೆ ಹೊಸ ಅಭಿಲಾಷೆ ಮೂಡಿದೆ, ಪಾಲಕರ ನಿರೀಕ್ಷೆಗಳನ್ನು ಹುಷಿಗೊಳಿಸದೆ ವಿದ್ಯಾರ್ಥಿಗಳನ್ನು ಉತ್ತಮ ಕಲಿಕೆಗೆ ಅಣಿಗೊಳಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಎಂದರು .ಐದು ದಿನಗಳ ಕಾಲ ನಡೆಯುವ ಈ ತರಬೇತಿ ಶಿಬಿರದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶಪ್ಪ ಮಾತನಾಡಿ ಸರ್ಕಾರವು ಶಿಕ್ಷಣವನ್ನು ಅಭಿವೃದ್ಧಿಗೊಳಿಸುವಲ್ಲಿ ಸರ್ವ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಭಾಗದ ಶಿಕ್ಷಣವನ್ನ ಸಸಕ್ತಗೊಳಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎ
ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ಎಂ ಬಿ ಅರಳಿ, ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದುರಿ ಗೌರವಾಧ್ಯಕ್ಷ ಲಕ್ಷ್ಮಣ್ ಪೂಜಾರ, ದೈಹಿಕ ಶಿಕ್ಷಣ ಪರಿವೀಕ್ಷಕಿ ಸರಸ್ವತಿ ಎಂ, ಪೂರ್ವ ಪ್ರಾಥಮಿಕ ತರಬೇತಿಯ ನೋಡಲ್ ಬಿ ಆರ್ ಪಿ ಲೋಕೇಶ್ ಜಿ, ಅಜೀಮ್ ಪ್ರೇಮ್ ಜಿ ಫೌಂಡೇಶನ್ ಮತ್ತು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.