WhatsApp Image 2024-07-05 at 4.09.22 PM

ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಸಂಪೂರ್ಣತಾ ಅಭಿಯಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 5- ನೀತಿ ಆಯೋಗದಿಂದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ‘ಸಂಪೂರ್ಣತಾ ಅಭಿಯಾನ’ ನಡೆಸಲಾಗುತ್ತಿದೆ ಎಂದು ನೀತಿ ಆಯೋಗದ ಉಪ ಸಮಿತಿಯ ಸಲಹೆಗಾರರಾದ ಡಾ.ಮುನಿರಾಜು ಅವರು ಹೇಳಿದರು.

ಗುರುವಾರ ಕಂಪ್ಲಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ‘ಸಂಪೂರ್ಣತಾ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಭಿವೃದ್ಧಿಯಾಗದ ಸ್ಥಳಗಳನ್ನು ಗುರುತಿಸಿ ಅಲ್ಲಿನ ಅಭಿವೃದ್ಧಿಯ ಪ್ರಗತಿ ಪರಿಶೀಲಿಸಲು ಈ ಅಭಿಯಾನವು ಸಹಾಯವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಅಭಿಯಾನ ನಡೆಯಲಿದ್ದು, ಮಕ್ಕಳ ಆರೋಗ್ಯ, ಶೈಕ್ಷಣಿಕವಾಗಿ ಮಕ್ಕಳನ್ನು ಅಭಿವೃದ್ಧಿ ಪಡಿಸುವುದು. ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಪರಿಶೀಲಿಸುವುದಾಗಿದೆ ಎಂದರು.

ಅಭಿಯಾನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಈ ಬ್ಲಾಕ್‍ನಲ್ಲಿ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ, ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಮತ್ತು ನಡವಳಿಕೆಯನ್ನು ಬದಲಾಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಕಂಪ್ಲಿ ಪಟ್ಟಣದ ವಿವಿಧ ಮುಖ್ಯ ಬೀದಿಗಳಲ್ಲಿ ‘ಸಂಪೂರ್ಣತಾ ಅಭಿಯಾನ’ದ ಜಾಥಾ ನಡೆಯಿತು.

ಈ ವೇಳೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ ತಿಪ್ಪೇರುದ್ರಪ್ಪ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಮೈತ್ರಿ, ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಆಚಾರ್ಯ, ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಡಿಹೆಚ್‍ಓ ಡಾ.ವೈ,ರಮೇಶ್‍ಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಕಂಪ್ಲಿ ತಾಪಂ ಆಡಳಿತಾಧಿಕಾರಿ ವಿನೋದ್, ತಾಪಂ ಇಓ ಶ್ರೀಕುಮಾರ್, ತಹಶೀಲ್ದಾರ ಶಿವರಾಜ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಮಹಿಳೆಯರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!